ಪರಿಶಿಷ್ಟ ಜಾತಿ ಸಮೀಕ್ಷೆ ವೇಳೆಯಲ್ಲೇ ಹೃದಯಾಘಾತದಿಂದ ಶಿಕ್ಷಕ ಸಾವು

ಕಲಬುರಗಿ: ಪರಿಶಿಷ್ಟ ಜಾತಿ ಸಮೀಕ್ಷೆ ಕಾರ್ಯಾಚರಣೆ ನಿರ್ವಹಿಸುತ್ತಿದ್ದ ಶಿಕ್ಷಕರೊಬ್ಬರು ಹೃದಯಘಾತದಿಂದ ಮೃತಪಟ್ಟ ಘಟನೆ ಚಿಂಚೋಳಿ ತಾಲೂಕಿನ ಚತ್ರಸಾಲ ಗ್ರಾಮದಲ್ಲಿ ಗುರುವಾರ ನಡೆದಿದೆ.

ನಾಗಶೆಟ್ಟಿ ಅಮೃತಪ್ಪ ಬಾಸಪಳ್ಳಿ(56) ಮೃತಪಟ್ಟ ಶಿಕ್ಷಕ. ನಾಗಶೆಟ್ಟಿ ಅವರು ಬುರಗಪಳ್ಳಿ ಗ್ರಾಮದವರು. 1998 ರಲ್ಲಿ ಶಿಕ್ಷಕರಾಗಿ ನೇಮಕವಾಗಿದ್ದರು. ಅವರು ಚತ್ರಸಾಲ ಗ್ರಾಮದಲ್ಲಿ ಪರಿಶಿಷ್ಟ ಜಾತಿ ಸಮೀಕ್ಷೆ ಕಾರ್ಯ ನಡೆಸುತ್ತಿದ್ದರು. ಈ ವೇಳೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಪತ್ನಿ ಹಾಗೂ ಮೂವರು ಪುತ್ರರು ಸೇರಿ ಅಪಾರ ಬಂಧು ಬಳಗಾಗಲಿದ್ದಾರೆ. ಶುಕ್ರವಾರ ಸ್ವಗ್ರಾಮದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ಮೂಲಗಳು ತಿಳಿಸಿವೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read