ಬೆಂಗಳೂರು : ಬೆಂಗಳೂರಿನಲ್ಲಿ ನಡೆಯುವ, ಐಪಿಎಲ್ 2025 ಪಂದ್ಯಗಳಿಗೆ ‘BMRCL’ ಮೆಟ್ರೋ ರೈಲು ಸೇವೆಯನ್ನು ವಿಸ್ತರಿಸಿದೆ.
TATA IPL T-20 ಕ್ರಿಕೆಟ್ ಪಂದ್ಯಗಳು ದಿನಾಂಕ 17 ಮತ್ತು 23ನೇ ಮೇ, 2025 ರಂದು ಬೆಂಗಳೂರಿನಲ್ಲಿ ನಡೆಯಲಿದ್ದು, ಸದರಿ ದಿನಗಳಲ್ಲಿ ನಮ್ಮ ಮೆಟ್ರೋ ಎಲ್ಲಾ ನಾಲ್ಕು ಟರ್ಮಿನಲ್ ಅಂದರೆ ವೈಟ್ಫೀಲ್ಡ್ (ಕಾಡುಗೋಡಿ), ಚಲ್ಲಘಟ್ಟ, ರೇಷ್ಮೆ ಸಂಸ್ಥೆ ಮತ್ತು ಮಾದವರ ಮೆಟ್ರೋ ನಿಲ್ದಾಣಗಳಿಂದ ಕೊನೆಯ ಮೆಟ್ರೋ ರೈಲು ಸೇವೆಯನ್ನು ಮಧ್ಯರಾತ್ರಿ 01.00ರ ವರೆಗೆ ವಿಸ್ತರಿಸಿದೆ.
ನಾಡಪ್ರಭು ಕೆಂಪೇಗೌಡ ನಿಲ್ದಾಣ ಮೆಜೆಸ್ಟಿಕ್ನಿಂದ ಎಲ್ಲಾ ನಾಲ್ಕು ದಿಕ್ಕುಗಳ ಕಡೆಗೆ ಕೊನೆಯ ರೈಲು ಮಧ್ಯರಾತ್ರಿ 01.35 ಕ್ಕೆ ಹೊರಡಲಿದೆ. ಪ್ರಯಾಣಿಕರು ಈ ಸೌಲಭ್ಯವನ್ನು ಬಳಸಿಕೊಳ್ಳಲು ಕೋರಿದೆ.
ಬೆಂಗಳೂರಿನಲ್ಲಿ ನಡೆಯುವ, ಐಪಿಎಲ್ 2025 ಪಂದ್ಯಗಳಿಗೆ, #BMRCL ಮೆಟ್ರೋ ರೈಲು ಸೇವೆಯನ್ನು ವಿಸ್ತರಿಸಿದೆ, ಹೆಚ್ಚಿನ ವಿವರಗಳಿಗಾಗಿ ಮಾಧ್ಯಮ ಪ್ರಕಟಣೆಯನ್ನು ಪರಿಶೀಲಿಸಿ. pic.twitter.com/2dt4b1aRka
— ನಮ್ಮ ಮೆಟ್ರೋ (@OfficialBMRCL) May 15, 2025
You Might Also Like
TAGGED:ನಮ್ಮ ಮೆಟ್ರೋ