ಬೆಂಗಳೂರು : ಸಾರ್ವಜನಿಕರು ಪೊಲೀಸ್ ಠಾಣೆಗೆ ಬಂದಾಗ ಸೌಜನ್ಯದಿಂದ ವರ್ತಿಸಬೇಕು ಎಂದು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.
ಉಲ್ಲೇಖಿತ ಮಾನ್ಯ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗ ಆದೇಶದಲ್ಲಿ ಹೆಚ್ಆರ್ಸಿ ಸಂಖ್ಯೆ: 2313/10/31/2023(ಬಿ-2)ಕ್ಕೆ ಸಂಬಂಧಿಸಿದಂತೆ, ಮಾನ್ಯ ಆಯೋಗವು ಯಾವುದೇ ಸಾರ್ವಜನಿಕರು ಠಾಣೆಗೆ ಬಂದಾಗ, ಅವರ ಜೊತೆ ಅನುಚಿತವಾಗಿ ವರ್ತಿಸದಂತೆ, ಹಾಗೂ ಅವರ ಮಾನವ ಹಕ್ಕುಗಳಿಗೆ ಧಕ್ಕೆಯಾಗದಂತೆ ನಡೆದುಕೊಳ್ಳುವಂತೆ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಸೂಕ್ತ ನಿರ್ದೇಶನವನ್ನು ನೀಡಬೇಕೆಂದು ಆದೇಶಿಸಲಾಗಿರುತ್ತದೆ.(ಪ್ರತ ಲಗತ್ತಿಸಿದೆ) ಆದ್ದರಿಂದ, ಮಾನ್ಯ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಆದೇಶದಂತೆ ಇನ್ನು ಮುಂದೆ ಯಾವುದೇ ಸಾರ್ವಜನಿಕರು ಪೊಲೀಸ್ ಠಾಣೆಗೆ ಬೇಟಿ ನೀಡಿದಾಗ ಅವರ ಜೊತೆ ಅನುಚಿತವಾಗಿ ವರ್ತಿಸದಂತೆ, ಹಾಗೂ ಅವರ ಮಾನವ ಹಕ್ಕುಗಳಿಗೆ ಧಕ್ಕೆಯಾಗದಂತೆ ಸೌಜನ್ಯದಿಂದ ನಡೆದುಕೊಳ್ಳುವಂತೆ ಕಟ್ಟುನಿಟ್ಟಾಗಿ ಸೂಚಿಸಲಾಗಿದೆ ಎಂದು ಆದೇಶ ಹೊರಡಿಸಿದೆ.




You Might Also Like
TAGGED:ರಾಜ್ಯ ಸರ್ಕಾರ