2024-25 ನೇ ಸಾಲಿಗೆ ಮಂಜೂರಾದ ರಾಜ್ಯದ ಮೈಸೂರು ಕಂದಾಯ ವಿಭಾಗಗಳಲ್ಲಿ ಅಲ್ಪಸಂಖ್ಯಾತರ ಸಮುದಾಯದ ಯುವ ಜನರಿಗೆ 90 ದಿನಗಳ ವಸತಿಯುತ ಪೊಲೀಸ್ ಸಬ್ ಇನ್ಸ್ಪೆಕ್ಟರ್ (ಪಿಐಎಸ್) ನೇಮಕಾತಿ ಪರೀಕ್ಷಾ ಪೂರ್ವ ತರಬೇತಿಯನ್ನು ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಪ್ರತಿಷ್ಠಿತ ಸಂಸ್ಥೆಯ ಮೂಲಕ ಪ್ರಾರಂಭಿಸಲು ಸೇವಾ ಸಿಂಧು ಪೋರ್ಟಲ್ https://sevasindhu.karnataka.gov.in ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಮೇ, 23 ಕೊನೆಯ ದಿನವಾಗಿದೆ. ಪೊಲೀಸ್ ಸಬ್ ಇನ್ಸ್ಪೆಕ್ಟರ್ (ಪಿಎಸ್ಐ) ನೇಮಕಾತಿ ಪರೀಕ್ಷಾ ಪೂರ್ವ ತರಬೇತಿ, ತರಬೇತಿ ಅವಧಿ 90 ದಿನಗಳು, ವಯಸ್ಸು 21 ರಿಂದ 30 ವರ್ಷಗಳು, ವಿದ್ಯಾರ್ಹತೆ ಅರ್ಜಿ ಸಲ್ಲಿಸಲು ನಿಗಧಿಪಡಿಸಿದ ಕೊನೆಯ ದಿನಾಂಕದೊಳಗೆ ಯು.ಜಿ.ಸಿ ಇಂದ ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾನಿಲಯದಲ್ಲಿ ಪದವಿ ಪಡೆದಿರಬೇಕು, ಕರ್ನಾಟಕದ ಖಾಯಂ ನಿವಾಸಿಯಾಗಿದ್ದು, ರಾಜ್ಯ ಅಲ್ಪಸಂಖ್ಯಾತರ ಸಮುದಾಯಗಳಾದ ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಜೇನ್, ಬೌದ್ಧ ಮತ್ತು ಪಾರ್ಸಿ ಸಮುದಾಯಗಳಿಗೆ ಸೇರಿದವರಾಗಿರಬೇಕು. ಈ ಅಭ್ಯರ್ಥಿಯು ನಿಗಧಿತ ನಮೂನೆಯಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆದಿರಬೇಕು. ಎತ್ತರ ಪುರುಷರಿಗೆ ಕನಿಷ್ಠ 168 ಸೆಂ.ಮೀ ಮತ್ತು ಮಹಿಳೆಯರಿಗೆ ಕನಿಷ್ಠ 157 ಸೆಂ.ಮೀ, ತೂಕ ಪುರುಷರಿಗೆ ಕನಿಷ್ಠ 50 ಕೆ.ಜಿ ಮತ್ತು ಮಹಿಳೆಯರಿಗೆ ಕನಿಷ್ಠ 45 ಕೆ.ಜಿ, ಎದೆಯ ಸುತ್ತಳತೆ (ಪುರುಷರಿಗೆ) ಕನಿಷ್ಠ 76 ಸೆಂ. ಮೀ ಆಯ್ಕೆ ವಿಧಾನ ಅಭ್ಯರ್ಥಿಗಳು ಪದವಿಯಲ್ಲಿ ಪಡೆದ ಅಂಕಗಳ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು. ತರಬೇತಿ ಸ್ಥಳ ಮೈಸೂರು, ಅರ್ಜಿ ಸಲ್ಲಿಸಲು https://sevasindhu.karnataka.gov.in/ sevasindhu/dpartmentservices https://dom.karnataka.gov.in ನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಕೃಷ್ಣಮೂರ್ತಿ ಅವರು ತಿಳಿಸಿದ್ದಾರೆ.