HomeLatest Newsಸೃಷ್ಟಿಯಾದ ಪೂರಕ ವಾತಾವರಣ: ಈ ಬಾರಿ ವಾಡಿಕೆಗೆ ಮೊದಲೇ ರಾಜ್ಯಕ್ಕೆ ಮುಂಗಾರು ಪ್ರವೇಶ ಸಾಧ್ಯತೆ

ಸೃಷ್ಟಿಯಾದ ಪೂರಕ ವಾತಾವರಣ: ಈ ಬಾರಿ ವಾಡಿಕೆಗೆ ಮೊದಲೇ ರಾಜ್ಯಕ್ಕೆ ಮುಂಗಾರು ಪ್ರವೇಶ ಸಾಧ್ಯತೆ

ಈ ಬಾರಿ ವಾಡಿಕೆಗಿಂತ ಮೊದಲೇ ನೈರುತ್ಯ ಮುಂಗಾರು ರಾಜ್ಯಕ್ಕೆ ಪ್ರವೇಶಿಸುವ ಸಾಧ್ಯತೆ ಇದೆ. ಮೇ 28ರಂದು ಕೇರಳ ಪ್ರವೇಶಿಸಲಿರುವ ಮುಂಗಾರು ಮಾರುತಗಳು ಬಲವಾಗಿದ್ದಲ್ಲಿ ಅದೇ ದಿನ ಕರ್ನಾಟಕದ ಕರಾವಳಿ ತೀರಕ್ಕೆ ಪ್ರವೇಶಿಸಲಿವೆ. ಮಾರುತಗಳು ದುರ್ಬಲವಾಗಿದ್ದಲ್ಲಿ ಒಂದೆರಡು ದಿನಗಳ ನಂತರ ರಾಜ್ಯಕ್ಕೆ ಎಂಟ್ರಿ ಕೊಡಲಿವೆ.

ವಾಡಿಕೆಯಂತೆ ಜೂನ್ 1 ರಂದು ಮುಂಗಾರು ಪ್ರವೇಶಿಸುತ್ತದೆ. ಆದರೆ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪದಲ್ಲಿ ಮಾನ್ಸೂನ್ ಆರಂಭಕ್ಕೆ ಪೂರಕ ವಾತಾವರಣ ಸೃಷ್ಟಿಯಾಗಿದೆ. ಹೀಗಾಗಿ ಮುಂಗಾರು ಮಾರುತಗಳು ಪ್ರಬಲವಾಗಿರುವ ಹಿನ್ನೆಲೆಯಲ್ಲಿ ಹಂತ ಹಂತವಾಗಿ ಚಲಿಸಿ ವಾಡಿಕೆಗೆ ಮೊದಲೇ ಕೇರಳ ಪ್ರವೇಶಿಸುಲಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ವಾಡಿಕೆಗಿಂತ ಅಧಿಕ ಮಳೆಯಾಗುವ ಸಂಭವ ಇದೆ. ಈ ಮುಂಗಾರು ಆಶಾದಾಯಕವಾಗಿದ್ದು, ವಾಡಿಕೆಗಿಂತ ಹೆಚ್ಚು ಪ್ರಮಾಣದಲ್ಲಿ ಮಳೆಯಾಗಲಿದೆ ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular