HomeLatest NewsBIG NEWS: ಚಾಕೋಲೆಟ್ ಗಳಲ್ಲಿ ಆಲ್ಕೋಹಾಲ್ ಅಂಶ ಪತ್ತೆ: ರಾಜ್ಯಾದ್ಯಂತ ಮಾದರಿ ಸಂಗ್ರಹ

BIG NEWS: ಚಾಕೋಲೆಟ್ ಗಳಲ್ಲಿ ಆಲ್ಕೋಹಾಲ್ ಅಂಶ ಪತ್ತೆ: ರಾಜ್ಯಾದ್ಯಂತ ಮಾದರಿ ಸಂಗ್ರಹ

ಬೆಂಗಳೂರು: ವಿದೇಶದಿಂದ ಆಮದು ಮಾಡಿಕೊಳ್ಳಲಾದ ಚಾಕೋಲೆಟ್ ಗಳಲ್ಲಿ ಆಲ್ಕೋಹಾಲ್ ಅಂಶ ಇರುವ ಹಿನ್ನೆಲೆಯಲ್ಲಿ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಅವುಗಳ ಮಾದರಿಗಳನ್ನು ಸಂಗ್ರಹಿಸಲು ಆರಂಭಿಸಿದೆ.

ಲೇಬಲ್ ಗಳ ಮೇಲೆ ಗಮನ ಹರಿಸುತ್ತಿರುವ ಇಲಾಖೆ ವಿಶೇಷವಾಗಿ ಆಲ್ಕೋಹಾಲ್ ಅಂಶ ಇರುವ ಬಗ್ಗೆ ಸ್ಪಷ್ಟ ಮಾಹಿತಿ ಬಹಿರಂಗಪಡಿಸದೆ ಮಾರಾಟವಾಗುವ ಉತ್ಪನ್ನಗಳಿಗೆ ಸಂಬಂಧಿಸಿದಂತೆ ನಿಗಾ ವಹಿಸಿದೆ. ರಾಷ್ಟ್ರೀಯ ವಾರ್ಷಿಕ ಕಣ್ಗಾಗಲು ಯೋಜನೆಯ ಭಾಗವಾಗಿ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದ ನಿರ್ದೇಶನ ಪಡೆದ ಬಳಿಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ ಈ ಅಭಿಯಾನ ಆರಂಭಿಸಿದೆ.

ಈ ಮಾದರಿಗಳ ಗುಣಮಟ್ಟ ಸುರಕ್ಷತೆ ಮತ್ತು ಲೇಬಲಿಂಗ್, ಜಾಹೀರಾತು ನಿಯಮಗಳ ಕುರಿತು ಪರೀಕ್ಷಿಸಲಾಗುವುದು. ಸಂಗ್ರಹಿಸಲಾದ ಡೇಟಾವನ್ನು ಕೇಂದ್ರ ಆಹಾರ ಸುರಕ್ಷತಾ ಅನುಸರಣಾ ವ್ಯವಸ್ಥೆಗೆ ಅಪ್ಲೋಡ್ ಮಾಡಲಾಗುವುದು. ನಿಯಮ ಉಲ್ಲಂಘಿಸುವವರ ವಿರುದ್ಧ ಕ್ರಮ ಜರುಗಿಸಲಾಗುವುದು ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದುವರೆಗೆ 23 ಮಾದರಿಗಳನ್ನು ಸಂಗ್ರಹಿಸಲಾಗಿದ್ದು, ಇವುಗಳ ಲೇಬಲ್ ಗಳಲ್ಲಿ ಗ್ರಾಹಕರಿಗೆ ವಿಶೇಷವಾಗಿ ಮಕ್ಕಳಿಗೆ ಚಾಕೋಲೆಟ್ ಗಳಲ್ಲಿ ಇರುವ ಆಲ್ಕೋಹಾಲ್ ಅಂಶದ ಬಗ್ಗೆ ಎಚ್ಚರಿಕೆ ನೀಡಿಲ್ಲವೆಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular