HomeLatest NewsBIG NEWS : ರೈಲ್ವೇ ಪ್ರಯಾಣಿಕರಿಗೆ ಮುಖ್ಯ ಮಾಹಿತಿ : ಹಾಸನ ಜಿಲ್ಲೆಯ ಮೂಲಕ ಸಂಚರಿಸುವ...

BIG NEWS : ರೈಲ್ವೇ ಪ್ರಯಾಣಿಕರಿಗೆ ಮುಖ್ಯ ಮಾಹಿತಿ : ಹಾಸನ ಜಿಲ್ಲೆಯ ಮೂಲಕ ಸಂಚರಿಸುವ ರೈಲುಗಳ ಸಂಚಾರ ರದ್ದು.!

ಡಿಜಿಟಲ್ ಡೆಸ್ಕ್ : ಸಕಲೇಶಪುರ – ಸುಬ್ರಹ್ಮಣ್ಯ ರೋಡ್ ಮಾರ್ಗದಲ್ಲಿ ಜೂನ್ 1 ರಿಂದ ನವೆಂಬರ್ 1, 2025 ರವರೆಗೆ ಸುರಕ್ಷತೆ ಮತ್ತು ರೈಲ್ವೆ ವಿದ್ಯುದ್ದೀಕರಣ ಕಾಮಗಾರಿ ನಡೆಯಲಿರುವ ಕಾರಣದಿಂದಾಗಿ ಕೆಲವು ರೈಲುಗಳ ಸಂಚಾರವನ್ನು ತಾತ್ಕಾಲಿಕವಾಗಿ ರದ್ದುಪಡಿಸಲಾಗಿದೆ.

ಈ ಹಿನ್ನೆಲೆಯಲ್ಲಿ, ಮೇ 31 ರಿಂದ ನವೆಂಬರ್ 1, 2025 ರವರೆಗೆ ಶನಿವಾರಗಳಂದು ಸಂಚರಿಸುವ ಯಶವಂತಪುರ-ಮಂಗಳೂರು ಜಂಕ್ಷನ್ ಸಾಪ್ತಾಹಿಕ ಎಕ್ಸ್ಪ್ರೆಸ್ (ರೈಲು ಸಂಖ್ಯೆ 16539) ರದ್ದಾಗಲಿದೆ. ಅದೇ ರೀತಿ, ಜೂನ್ 1 ರಿಂದ ನವೆಂಬರ್ 2, 2025 ರವರೆಗೆ ಭಾನುವಾರಗಳಂದು ಸಂಚರಿಸುವ ಮಂಗಳೂರು ಜಂಕ್ಷನ್-ಯಶವಂತಪುರ ಸಾಪ್ತಾಹಿಕ ಎಕ್ಸ್ಪ್ರೆಸ್ (ರೈಲು ಸಂಖ್ಯೆ 16540) ಸಹ ರದ್ದಾಗಲಿದೆ.

ಜೂನ್ 1 ರಿಂದ ಅಕ್ಟೋಬರ್ 30, 2025 ರವರೆಗೆ ಮಂಗಳವಾರ, ಗುರುವಾರ ಮತ್ತು ಭಾನುವಾರಗಳಂದು ಸಂಚರಿಸುವ ಯಶವಂತಪುರ-ಮಂಗಳೂರು ಜಂಕ್ಷನ್ ಟ್ರೈ-ವೀಕ್ಲಿ ಎಕ್ಸ್ಪ್ರೆಸ್ (ರೈಲು ಸಂಖ್ಯೆ 16575) ರದ್ದಾಗಲಿದೆ. ಇದರ ಜೊತೆಗೆ, ಜೂನ್ 2, 2025 ರಿಂದ ಅಕ್ಟೋಬರ್ 31, 2025 ರವರೆಗೆ ಸೋಮವಾರ, ಬುಧವಾರ ಮತ್ತು ಶುಕ್ರವಾರಗಳಂದು ಸಂಚರಿಸುವ ಮಂಗಳೂರು-ಯಶವಂತಪುರ ಟ್ರೈ-ವೀಕ್ಲಿ ಎಕ್ಸ್ಪ್ರೆಸ್ (ರೈಲು ಸಂಖ್ಯೆ 16576) ಸಹ ರದ್ಯಾಗಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದಲ್ಲದೆ, ಜೂನ್ 2 ರಿಂದ ಅಕ್ಟೋಬರ್ 31, 2025 ರವರೆಗೆ ಸೋಮವಾರ, ಬುಧವಾರ ಮತ್ತು ಶುಕ್ರವಾರಗಳಂದು ಸಂಚರಿಸುವ ಯಶವಂತಪುರ-ಕಾರವಾರ ಟ್ರೈ-ವೀಕ್ಲಿ ಎಕ್ಸ್ಪ್ರೆಸ್ (ರೈಲು ಸಂಖ್ಯೆ 16515) ಹಾಗೂ ಜೂನ್ 3, 2025 ರಿಂದ ನವೆಂಬರ್ 1, 2025 ರವರೆಗೆ ಮಂಗಳವಾರ, ಗುರುವಾರ ಮತ್ತು ಶನಿವಾರಗಳಂದು ಸಂಚರಿಸುವ ಕಾರವಾರ-ಯಶವಂತಪುರ ಟ್ರೈ-ವೀಕ್ಲಿ ಎಕ್ಸ್ಪ್ರೆಸ್ (ರೈಲು ಸಂಖ್ಯೆ 16516) ರೈಲುಗಳ ಸಂಚಾರವನ್ನು ಸಹ ರದ್ದುಗೊಳಿಸಲಾಗಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular