ಬೆಂಗಳೂರು : ಸರ್ಕಾರಿ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳ ಅತಿಥಿ ಶಿಕ್ಷಕರು ಹಾಗೂ ಉಪನ್ಯಾಸಕರ ಗೌರವಧನವನ್ನು ತಲಾ ₹2,000 ಹೆಚ್ಚಳ ಮಾಡಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದೆ.
ಈ ಹಿಂದೆ ಸರ್ಕಾರ ಪ್ರಾಥಮಿಕ ಶಾಲಾ ಅತಿಥಿ ಶಿಕ್ಷಕರಿಗೆ 10,000 ರೂಪಾಯಿ ಹಾಗೂ ಪ್ರೌಢಶಾಲಾ ಅತಿಥಿ ಶಿಕ್ಷಕರಿಗೆ 10,500 ಗೌರವ ಸಂಭಾವನೆ ನಿಗದಿಪಡಿಸಿತ್ತು. ಇದೀಗ ಈ ಮೊತ್ತಕ್ಕೆ ಹೆಚ್ಚುವರಿಯಾಗಿ 2,000 ರೂಪಾಯಿಗಳು ಸೇರ್ಪಡೆ ಆಗಿದೆ. ಪರಿಷ್ಕೃತ ಗೌರವ ಸಂಭಾವನೆಯು ಪ್ರಾಥಮಿಕ ಶಾಲಾ ಅತಿಥಿ ಶಿಕ್ಷಕರಿಗೆ 12,000 ರೂಪಾಯಿ ಸಿಗಲಿದೆ. ಪ್ರೌಢಶಾಲಾ ಅತಿಥಿ ಶಿಕ್ಷಕರಿಗೆ 12,500 ರೂಪಾಯಿ ಸಿಗಲಿದೆ.

