ತುಮಕೂರಿಗೆ ಮೆಟ್ರೋ ವಿಸ್ತರಣೆ ‘ಸ್ಟುಪಿಡ್ ಐಡಿಯಾ’: ಸಂಸದ ತೇಜಸ್ವಿ ಸೂರ್ಯ ಟೀಕೆ

ಬೆಂಗಳೂರು: ಬೆಂಗಳೂರು-ತುಮಕೂರು ನಡುವೆ ಮೆಟ್ರೋ ವಿಸ್ತರಣೆ ಸ್ಟುಪಿಡ್ ಐಡಿಯಾ ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಟೀಕಿಸಿದ್ದಾರೆ.

ತುಮಕೂರಿಗೆ ಮೆಟ್ರೋ ಸಂಪರ್ಕ ವಿಚಾರವಾಗಿ ಬಿಜೆಪಿ ನಾಯಕರಲ್ಲಿಯೇ ಬಿನ್ನಾಭಿಪ್ರಾಯ ಆರಂಭವಾಗಿದೆ. ಕೇಂದ್ರ ಸಚಿವ ವಿ.ಸೋಮಣ್ಣ, ಬೆಂಗಳೂರು-ತುಮಕೂರು ನಡುವೆ ಮೆಟ್ರೋ ಸಂಪರ್ಕ ಯೋಜನೆಯನ್ನು ತಮ್ಮ ಅವಧಿಯಲ್ಲಿಯೇ ಕಾರ್ಯರೂಪಕ್ಕೆ ತರುವುದಾಗಿ ಘೋಷಿಸಿದ್ದಾರೆ. ಮತ್ತೊಂದೆಡೆ ಮೆಟ್ರೋ ಸಂಪರ್ಕ ಯೋಜನೆ ಸಂಬಂಧ ಖಾಸಗಿ ಕಂಪನಿ ಸಲ್ಲಿಸಿದ್ದ ಕಾರ್ಯಸಾಧ್ಯತಾ ಪರೀಕ್ಷಾ ವರದಿಯನ್ನು ಸರ್ಕಾರಕ್ಕೆ ಬಿಎಂಆರ್ ಸಿ ಎಲ್ ಸಲ್ಲಿಕೆ ಮಾಡಿದೆ. ಈ ಬಗ್ಗೆ ತಿಳಿಯುತ್ತಿದ್ದಂತೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ತುಮಕೂರಿಗೆ ಮೆಟ್ರೋ ವಿಸ್ತರಣೆ ಮಾಡುವ ಕರ್ನಾಟಕ ಸರ್ಕಾರದ ನಿರ್ಧಾರ ಮೂರ್ಖತನದ್ದು. ಇದೊಂದು ಸ್ಟುಪಿಡ್ ಐಡಿಯಾ. ಅದರ ಬದಲಾಗಿ ಬೆಂಗಳೂರಿನಲ್ಲಿ ಬಾಕಿ ಇರುವ ಮೆಟ್ರೋ ಮಾರ್ಗಗಳ ಕಾಮಗಾರಿಯನ್ನು ಪೂರ್ಣಗೊಳಿಸುವ ಹಾಗೂ ಬೆಂಗಳೂರಿಗೆ ಮೆಟ್ರೋವನ್ನು ಮತ್ತಷ್ಟು ವಿಸ್ತರಿಸುವತ್ತ ಗಮನಹರಿಸಬೇಕು. ಮೆಟ್ರೋ ಎಂಬುದು ನಗರದೊಳಗಿನ ಸಂಪರ್ಕವನ್ನು ಹೆಚ್ಚಿಸುವುದಕ್ಕೆ ಸಂಬಂಧಿಸಿದ್ದು. ತುಮಕೂರಿಗೆ ಆರ್ ಆರ್ ಟಿಸಿ ಅಥವಾ ಉಪನಗರ ರೈಲು ಯೋಜನೆ ಒದಗಿಸಬೇಕು ಎಂದು ಆಗ್ರಹಿಸಿದ್ದಾರೆ.

ಇದೇ ವೇಳೆ ಬಿಜೆಪಿ ಇನ್ನೋರ್ವ ನಾಯಕ ಮಾಜಿ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ ಕೂಡ ತುಮಕೂರಿಗೆ ಮೆಟ್ರೋ ವಿಸ್ತರಣೆ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮೆಟ್ರೋ ಎಂದರೇನು? ಸಬ್ ಅರ್ಬನ್, ಇಂಟರ್ ಸಿಟಿ, ಹಾಗೂ ದೀರ್ಘ ದೂರ ಕ್ರಮಿಸುವ ವ್ಯತ್ಯಾಸವೇನು? ಎಂಬುದನ್ನು ಸರ್ಕಾರಕ್ಕೆ ಯಾರಾದರೂ ಅರ್ಥ ಮಾಡಿಸುವಿರಾ? ಎಂದು ಪ್ರಶ್ನಿಸಿದ್ದಾರೆ.

ಮೆಟ್ರೋ ಬೇಡಿಕೆಯನ್ನು ಇನ್ಮುಂದೆ ವಿಜಯಪುರ, ಚಿತ್ತಾಪುರ, ಬೆಳಗಾವಿಗೂ ವಿಸ್ತರಿಸಬಹುದು ಎಂದು ವ್ಯಂಗ್ಯವಾಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read