BIG NEWS: ಸಿಲಿಂಡರ್ ಬದಲಾಯಿಸುವಾಗ ಅವಘಡ: ಹೊತ್ತಿಕೊಂಡ ಬೆಂಕಿ: ಐವರಿಗೆ ಗಾಯ

ಮೈಸೂರು: ಸಿಲಿಂಡರ್ ಬದಲಾಯಿಸುವಾಗ ಗ್ಯಾಸ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ಐವರು ಗಾಯಗೊಂಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ಹುಣಸೂರು ತಾಲೂಕಿನ ಕುಲ್ಕುಣಿಕೆಯ ಕುರ್ಜನ್ ಬೀದಿಯಲ್ಲಿ ನಿಂಗರಾಜು ಎಂಬುವವರ ಮನೆಯಲ್ಲಿ ಈ ಘಟನೆ ನಡೆದಿದೆ. ನಿಂಗರಾಜು ಪತ್ನಿ ಜ್ಯೋತಿ, ಪಕ್ಕದ ಮನೆಯ ರಾಣಿಯಮ್ಮ, ಶೀಲ, ನಾಗಮ್ಮ ಸೇರಿದಂತೆ ಐವರು ಗಾಯಗೊಂಡಿದ್ದಾರೆ.

ಗಾಯಾಳುಗಳನ್ನು ಮೈಸೂರಿನ ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿಲಿಂಡರ್ ಬದಲಿಸುವಾಗ ಜೋರಾದ ಶಬ್ಧ ಬಂದಿದ್ದು, ಅಕ್ಕ-ಪಕ್ಕದ ಮನೆಯವರು ಓಡಿ ಬಂದು ನೋಡಲು ಹೋಗಿದ್ದಾರೆ. ಈ ವೇಳೆ ಬೆಂಕಿ ಅವರ ಬಟ್ಟೆಗೆ ಹೊತ್ತಿಕೊಂಡಿದೆ. ಹುಣಸೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read