ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ನಲ್ಲಿ ಐಪಿಎಲ್ ಪಂದ್ಯ ಹಿನ್ನೆಲೆಯಲ್ಲಿ ಕ್ರೀಡಾಂಗಣದತ್ತ ಕ್ರಿಕೇಟ್ ಪೇಮಿಗಳು ಆಗಮಿಸುತ್ತಿದ್ದು, ನಗರದ ಹಲವೆಡೆ ಟ್ರಾಫಿಕ್ ಜಾಮ್ ಸಂಭವಿಸಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಕೋಲ್ಕತ್ತಾ ನೈಟ್ ರೈಡರ್ಸ್ ನಡುವೆ ಐಪಿಎಲ್ ಟಿ-20 ಹಿನ್ನೆಲೆಯಲ್ಲಿ ಕ್ರಿಕೆಟ್ ಅಭಿಮಾನಿಗಳು ಚಿನ್ನಸ್ವಾಮಿ ಕ್ರೀಡಾಂಗಣದತ್ತ ಆಗಮಿಸುತ್ತಿದ್ದಾರೆ. ವೀಕೆಂಡ್ ಹಿನ್ನೆಲೆಯಲ್ಲಿ ಐಪಿಎಲ್ ಮ್ಯಾಚ್ ಗಾಗಿ ಚಿನ್ನಸ್ವಾಮಿ ಕ್ರೀಡಾಂಗಣದತ್ತ ಸಾಗುತ್ತಿದ್ದು, ಕಿಲೋಮೀಟರ್ ಗಟ್ಟಲೇ ಟ್ರಾಫಿಕ್ ಜಾಮ್ ಉಂಟಾಗಿದೆ.
ಕಾರ್ಪೊರೇಶನ್ ಸರ್ಕಲ್, ಎಂಜಿ.ರಸ್ತೆ, ರಿಚ್ಮಂಡ್ ಸರ್ಕಲ್, ಶಾಂತಿನಗರ, ಕಬ್ಬನ್ ಪಾರ್ಕ್ ರಸ್ತೆಗಳಲ್ಲಿ ಸಂಚಾರ ದಟ್ಟಣೆಯುಂತಾಗಿದ್ದು, ವಾಹನ ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.