ಹೈದರಾಬಾದ್: ಗುಲ್ಜಾರ್ ಹೌಸ್ ಕಟ್ಟಡದಲ್ಲಿ ಭೀಕರ ಬೆಂಕಿ ಅವಘಡ ಸಂಭವಿಸಿದ್ದು, 8 ಜನರು ಸಾವನ್ನಪ್ಪಿರುವ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ.
ಮೂವರು ಮಹಿಳೆಯರು, ಇಬ್ಬರು ಮಕ್ಕಳು ಸೇರಿದಂತೆ 8 ಜನರು ಸಾವನ್ನಪ್ಪಿದ್ದಾರೆ. ಇಂದು ಬೆಳಿಗ್ಗೆ 6:30ರ ಸುಮಾರಿಗೆ ಈ ದುರಂತ ಸಂಭವಿಸಿದೆ.
ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ದೌಡಾಯಿಸಿದ್ದು ಬೆಂಕಿ ತಹಬದಿಗೆ ತರುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ ದುರಂತದಲ್ಲಿ 8 ಜನರು ಸಾವನ್ನಪ್ಪಿದ್ದಾರೆ. ಕಟ್ಟದದಲ್ಲಿ ಸಿಲುಕಿದವರ ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ.