HomeLatest Newsವಿದ್ಯಾರ್ಥಿಗಳು, ಶಿಕ್ಷಕರಿಗೆ ಮುಖ್ಯ ಮಾಹಿತಿ: ರಾಜ್ಯಾದ್ಯಂತ ಮೇ 29ರಿಂದ ಶಾಲೆ ಆರಂಭ: ಮೊದಲ ದಿನವೇ ಪುಸ್ತಕ,...

ವಿದ್ಯಾರ್ಥಿಗಳು, ಶಿಕ್ಷಕರಿಗೆ ಮುಖ್ಯ ಮಾಹಿತಿ: ರಾಜ್ಯಾದ್ಯಂತ ಮೇ 29ರಿಂದ ಶಾಲೆ ಆರಂಭ: ಮೊದಲ ದಿನವೇ ಪುಸ್ತಕ, ಸಮವಸ್ತ್ರ ವಿತರಣೆ

ರಾಜ್ಯಾದ್ಯಂತ ಮೇ 29 ರಿಂದ ಶಾಲೆಗಳು ಆರಂಭವಾಗಲಿವೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ಶನಿವಾರ ವಿಜಯಪುರ ಜಿಲ್ಲೆ ಮುದ್ದೇಬಿಹಾಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇ 29 ರಿಂದ ರಾಜ್ಯದ್ಯಂತ ಶಾಲೆ ಆರಂಭವಾಗಲಿದ್ದು, ಸ್ಥಳೀಯ ಜನಪ್ರತಿನಿಧಿಗಳು, ಅಧಿಕಾರಿಗಳು ಸರ್ಕಾರಿ ಶಾಲೆಗಳಿಗೆ ತೆರಳಿ ವಿದ್ಯಾರ್ಥಿಗಳನ್ನು ಸ್ವಾಗತಿಸಲಿದ್ದಾರೆ ಎಂದು ಹೇಳಿದ್ದಾರೆ.

ಶಾಲೆಯ ಆರಂಭದ ದಿನವೇ ಎಲ್ಲ ಮಕ್ಕಳಿಗೆ ಸಮವಸ್ತ್ರ, ಪಠ್ಯಪುಸ್ತಕ ವಿತರಿಸಲಾಗುವುದು. ಶೂ, ಸಾಕ್ಸ್ ಗಳನ್ನು ಹಂತ ಹಂತವಾಗಿ ಶಾಲೆಯಲ್ಲಿ ವಿತರಿಸಲಾಗುವುದು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಾಲೆಗಳಲ್ಲಿ ಮಕ್ಕಳಿಗೆ ನೈತಿಕ ಶಿಕ್ಷಣ ನೀಡಲು ಸೂಚನೆ ನೀಡಿದ್ದಾರೆ. ಈ ವರ್ಷ ಪ್ರಾಥಮಿಕ, ಪೂರ್ವ ಪ್ರಾಥಮಿಕ, ಮಾಧ್ಯಮಿಕ, ಪ್ರೌಢಶಾಲೆ, ಪಿಯುಸಿ ಹಂತದಲ್ಲಿ ಮಕ್ಕಳಿಗೆ ಮೌಲ್ಯವುಳ್ಳ ಶಿಕ್ಷಣ ನೀಡುವ ಉದ್ದೇಶದಿಂದ ನೀತಿ ವಿಜ್ಞಾನ ಬೋಧಿಸಲಾಗುವುದು ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular