HomeLatest NewsBIG NEWS: ಡಿಸೆಂಬರ್ ನಲ್ಲಿ ಸಚಿವ ಸಂಪುಟ ವಿಸ್ತರಣೆ ವಿಚಾರ: ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದೇನು?

BIG NEWS: ಡಿಸೆಂಬರ್ ನಲ್ಲಿ ಸಚಿವ ಸಂಪುಟ ವಿಸ್ತರಣೆ ವಿಚಾರ: ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದೇನು?

ಬೆಳಗಾವಿ: ಡಿಸೆಂಬರ್ ನಲ್ಲಿ ಸಚಿವ ಸಂಪುಟ ವಿಸ್ತರಣೆ ವಿಚಾರಕ್ಕೆ ಸಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಡಿಸೆಂಬರ್ ಇನ್ನೂ ಬಹಳ ದೂರವಿದೆ. ಆದಾಗ ನೋಡೋಣ ಎಂದು ಹೇಳಿದ್ದಾರೆ.

ಬೆಳಗಾವಿಯಲ್ಲಿ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, 30 ತಿಂಗಳ ಬಳಿಕ ಸಚಿವರಾಗಬೇಕು ಎಂದು ಬಹಳಷ್ಟು ಶಾಸಕರ ಒತ್ತಾಸೆಯಿದೆ. ಸಚಿವ ಸಂಪುಟ ವಿಸ್ತರಣೆಯಾದರೆ ಒಳ್ಳೆಯದು. ಎಲ್ಲರಿಗೂ ಅವಕಾಶ ಸಿಗುತ್ತೆ ಎಂದಿದ್ದಾರೆ.

ಈ ಬಗ್ಗೆ ನಿರ್ಧಾರ ಮಾಡುವುದು ಹೈಕಮಾಂಡ್. ನಮ್ಮ ಮಟ್ಟದಲ್ಲಿ ಇಲ್ಲ. ಸಚಿವರ ಕಾರ್ಯವೈಖರಿ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ. ಸಚಿವ ಸಂಪುಟ ವಿಸ್ತರಣೆಯಾದರೆ ಹೊಸ ಲೀಡರ್ ಶಿಪ್ ಬೆಳೆಯುತ್ತದೆ ಎಂದು ಹೇಳಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular