BIG NEWS : ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ..! ಈ ವಾರ ಕರ್ನಾಟಕ ‘CET’ ಫಲಿತಾಂಶ ಪ್ರಕಟ ಸಾಧ್ಯತೆ |KCET Result 2025

ಬೆಂಗಳೂರು : ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ..! ಈ ವಾರ ಕರ್ನಾಟಕ ಸಿಇಟಿ ಫಲಿತಾಂಶ ಪ್ರಕಟವಾಗುವ ಸಾಧ್ಯತೆಯಿದೆ ಎನ್ನಲಾಗಿದೆ. ಎಂಜಿನಿಯರಿಂಗ್ ಸೇರಿ ವಿವಿಧ ವೃತ್ತಿ ಶಿಕ್ಷಣ ಕೋರ್ಸ್ಗಳ ಪ್ರವೇಶಕ್ಕೆ ನಡೆದಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆಯ (ಸಿಇಟಿ) ಫಲಿತಾಂಶ ಈ ವಾರಾಂತ್ಯದೊಳಗೆ ಪ್ರಕಟವಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಸದ್ಯ, ರ್ಯಾಂಕಿಂಗ್ ಸಿದ್ದಪಡಿಸುವ ಕಾರ್ಯ ನಡೆಯುತ್ತಿದೆ. ಶೀಘ್ರದಲ್ಲೇ ಫಲಿತಾಂಶ ಪ್ರಕಟವಾಗಲಿದೆ.
ಸಿಬಿಎಸ್ಇ, ಐಸಿಎಸ್ಇ 12ನೇ ತರಗತಿ ಫಲಿತಾಂಶ ಮತ್ತು ರಾಜ್ಯ ದ್ವಿತೀಯ ಪಿಯುಸಿ ಪರೀಕ್ಷೆ-2ರ ಫಲಿತಾಂಶ ಪ್ರಕಟವಾದ ಬಳಿಕ ಸಿಇಟಿ ಫಲಿತಾಂಶ ಪ್ರಕಟಿಸುವುದಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕಾರಿಗಳು ಹೇಳಿದ್ದರು. ಅಂತೆಯೇ ಈಗಾಗಲೇ ಈ ಫಲಿತಾಂಶಗಳು ಪ್ರಕಟವಾಗಿವೆ.

ಈ ಫಲಿತಾಂಶ ಪರಿಗಣಿಸಿ ಸಂಬಂಧಿಸಿದ ವಿದ್ಯಾರ್ಥಿಗಳ ಸಿಇಟಿ ರ್ಯಾಂಕಿಂಗ್ ಸಿದ್ದಪಡಿಸುವ ಕಾರ್ಯ ನಡೆಯುತ್ತಿದೆ. ದ್ವಿತೀಯ ಪಿಯುಸಿ ಮತ್ತು ಸಿಇಟಿ ಪರೀಕ್ಷೆಯಲ್ಲಿ ವಿದ್ಯಾರ್ಥಿ ಪಡೆದಿರುವ ಅಂಕಗಳಲ್ಲಿ ತಲಾ ಶೇ.50 ರಷ್ಟು ಅಂಕಗಳನ್ನು ಒಟ್ಟುಗೂಡಿಸಿ ರ್ಯಾಂಕಿಂಗ್ ನೀಡಲಾಗುತ್ತದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read