ಮೈಸೂರು : ಸಿಎಂ ಸಿದ್ದರಾಮಯ್ಯ ವಿರುದ್ಧ ಏಕವಚನದಲ್ಲಿ ನಿಂದಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಮೈಸೂರು ಕೇಂದ್ರ ಕಾರಾಗೃಹದ ವಾರ್ಡನ್ ನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಮೈಸೂರು ಕೇಂದ್ರ ಕಾರಾಗೃಹದ ವಾರ್ಡನ್ ಪುನೀತ್ ಎಂಬುವವರನ್ನು ಸರಸ್ವತಿ ಪೊಲೀಸರು ವಶಕ್ಕೆ ಪಡೆದುಕೊಂಡು ಎಫ್ ಐ ಆರ್ ದಾಖಲಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಟಿ.ಕೆ ಬಡಾವಣೆಯ ಪವನ್ ದೂರು ಆಧರಿಸಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.ಘಟನೆ ಸಂಬಂಧ ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
You Might Also Like
TAGGED:CM ಸಿದ್ದರಾಮಯ್ಯ