ಬೆಂಗಳೂರು: ಬೆಂಗಳೂರಿನಲ್ಲಿ ಸುರಿದ ಮಹಾಮಳೆ ಅವಾಂತರಕ್ಕೆ ಮೊದಲ ಬಲಿಯಾಗಿದೆ. ವರುಣಾರ್ಭಟಕ್ಕೆ ಗೋಡೆ ಕುಸಿದು ಬಿದ್ದು ಮಹಿಳಾ ಉದ್ಯೋಗಿಯೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಬೆಂಗಳೂರಿನ ವೈಟ್ ಫೀಲ್ಡ್ ನಲ್ಲಿ ಈ ದುರಂತ ಸಂಭವಿಸಿದೆ. ಶಶಿಕಲಾ (35) ಮೃತ ಮಹಿಳೆ. ಭಾರಿ ಮಳೆಯಿಂದಾಗಿ ಗೋಡೆ ಕುಸಿದು ಬಿದ್ದ ಪರಿಣಾಮ ಅವಶೇಷಗಳಡಿ ಸಿಲುಕಿ ಮಹಿಳೆ ಸಾವನ್ನಪ್ಪಿದ್ದಾರೆ.
ಮೃತ ಶಶಿಕಲಾ ಖಾಸಗಿ ಕಂಪನಿಯ ಉದ್ಯೋಗಿಯಾಗಿದ್ದರು. ಹೆಚ್ಜಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.