HomeLatest NewsRain alert Karnataka : ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ 3-4 ದಿನ ಭಾರಿ ಮಳೆ...

Rain alert Karnataka : ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ 3-4 ದಿನ ಭಾರಿ ಮಳೆ : ರೆಡ್, ಆರೆಂಜ್ ಅಲರ್ಟ್ ಘೋಷಣೆ.!

ಬೆಂಗಳೂರು : ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ 3-4 ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ರೆಡ್ ಅಲರ್ಟ್, ಆರೆಂಜ್, ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ.

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, . ಹಾವೇರಿ, ಬಳ್ಳಾರಿ , ಹಾಸನ, ಕೊಡಗು, ಚಿಕ್ಕಮಗಳೂರು ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಿದೆ. ಚಿಕ್ಕಮಗಳೂರಿನಲ್ಲಿ ನಾಳೆ ನಾಡಿದ್ದು ಭಾರಿ ಮಳೆಯಾಗಲಿದ್ದು,  ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ಚಾಮರಾಜನಗರ, ಗದಗ ಕೊಪ್ಪಳ ವಿಜಯಪುರದಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಂಗಳೂರಿನಾದ್ಯಂತ ಗುಡುಗು ಸಹಿತ ಭಾರಿ ಮಳೆಯಾಗುತ್ತಿದ್ದು, ರಸ್ತೆಗಳು, ತಗ್ಗು ಪ್ರದೇಶಗಳು ಜಲಾವೃತಗೊಂಡಿವೆ. ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ನಿನ್ನೆ ತಡರಾತ್ರಿ ಸುರಿದ ಧಾರಾಕಾರ ಮಳೆಯಿಂದಾಗಿ ಬೆಂಗಳೂರಿನ ಬಹುತೇಕ ಕಡೆ ಪ್ರವಾಹ ಪರಿಸ್ಥಿತಿ ಎದುರಾಗಿತ್ತು. ಮನೆಗಳಲ್ಲಿ, ಬಡಾವಣೆಗಳಲ್ಲಿ ಇಂದು ಮಧ್ಯಾಹ್ನದಷ್ಟೊತ್ತಿಗೆ ನಿಂತ ನೀರನ್ನು ಹೊರ ಹಾಕುವ ಕೆಲಸವನ್ನು ಒಂದೆಡೆ ಬಿಬಿಎಂಪಿ ಸಿಬ್ಬಂದಿ, ಅಗ್ನಿಶಾಮಕ ಸಿಬ್ಬಂದಿ ಕೈಗೊಂಡಿದ್ದರು. ಅಲ್ಲದೇ ಮಳೆ ನೀರಿನಿಂದ ಆವೃತಗೊಂಡಿರುವ ನಿವಾಸಿಗಳ ಜನರನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸುವ ಕಾರ್ಯ ನಡೆಯುತ್ತಿರುವಾಗಲೇ ಮತ್ತೆ ಗುಡುಗು ಸಹಿತ ಭಾರಿ ಮಳೆಯಾಗುತ್ತಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular