GOOD NEWS : ರಾಜ್ಯ ಸರ್ಕಾರದಿಂದ ‘SC’ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ :  ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನ.!

ಡಿಜಿಟಲ್ ಡೆಸ್ಕ್ : 2024-25ನೇ ಸಾಲಿನಲ್ಲಿ ಎಸ್ಎಸ್ಎಲ್ಸಿ ಹಾಗೂ ಮೆಟ್ರಿಕ್ ನಂತರದ ಕೋರ್ಸ್ಗಳಾದ ದ್ವಿತೀಯ ಪಿಯುಸಿ, ಪದವಿ, ಸ್ನಾತಕೋತ್ತರ ಪದವಿ, ತಾಂತ್ರಿಕ ಪದವಿ, ಕೃಷಿ, ಪಶು ಸಂಗೋಪನೆ ಹಾಗೂ ವೈದ್ಯಕೀಯ ವಿಭಾಗದ ಪರೀಕ್ಷೆಯಲ್ಲಿ ಪ್ರಥಮ ಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ 2025-26ನೇ ಸಾಲಿನಲ್ಲಿ ಪ್ರೋತ್ಸಾಹ ಧನಕ್ಕಾಗಿ ಆನ್ಲೈನ್ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾರ್ಥಿಗಳು ಪ್ರೋತ್ಸಾಹ ಧನ ಪಡೆಯಲು ಇಲಾಖೆಯ ವೆಬ್ಸೈಟ್ ವಿಳಾಸ https://swdservices.karnataka.gov.in/PrizeMoneyClientApp/ ರಲ್ಲಿ ಅರ್ಜಿ ಸಲ್ಲಿಸಿ ಆನ್ಲೈನ್ ಸ್ವೀಕೃತಿ ಪ್ರತಿ, ವಿದ್ಯಾರ್ಥಿಯ ಆಧಾರ್ ಕಾರ್ಡ್, ವಿದ್ಯಾರ್ಥಿಯ ಜಾತಿ ಮತ್ತು ಆದಾಯ ಪ್ರಮಾಣ ಪತ್ರ. ಅಂಕಪಟ್ಟಿ, ವಿದ್ಯಾರ್ಥಿಯ ಬ್ಯಾಂಕ್ ಪಾಸ್ ಪುಸ್ತಕ (ಕಡ್ಡಾಯವಾಗಿ ಆಧಾರ್ ಸೀಡಿಂಗ್ ಮತ್ತು ಎನ್.ಪಿ.ಸಿ.ಐ ಮ್ಯಾಪಿಂಗ್ ಮಾಡಿಸಿರತಕ್ಕದ್ದು) ಈ ದಾಖಲೆಗಳನ್ನು ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಪೊನ್ನಂಪೇಟೆ, ವಿರಾಜಪೇಟೆ ತಾಲ್ಲೂಕು ಇಲ್ಲಿಗೆ ಸಲ್ಲಿಸುವುದು.

ಹೆಚ್ಚಿನ ಮಾಹಿತಿಗೆ https://swdservices.karnataka.gov.in/PrizeMoneyClientApp/ವೆಬ್ಸೈಟ್ ಹಾಗೂ ಸಹಾಯಕ ನಿರ್ದೇಶಕರು, (ಗ್ರೇಡ್-2) ಸಮಾಜ ಕಲ್ಯಾಣ ಇಲಾಖೆ, ಪೆÇನ್ನಂಪೇಟೆ ದೂ.ಸಂ 9480843157 ಅಥವಾ ಕಚೇರಿಗೆ ನೇರ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಬಹುದು ಎಂದು ವಿರಾಜಪೇಟೆ ಮತ್ತು ಪೊನ್ನಂಪೇಟೆ ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read