ಬೆಂಗಳೂರು : ಬೆಂಗಳೂರಲ್ಲಿ ಸುರಿದ ಮಹಾಮಳೆಗೆ ಮಹಿಳೆ ಬಲಿಯಾಗಿದ್ದು, ಬಿಬಿಎಂಪಿಯಿಂದ 5 ಲಕ್ಷ ಪರಿಹಾರ ಘೋಷಣೆ ಮಾಡಲಾಗಿದೆ.
ಮಳೆಹಾನಿ ಕುರಿತು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಗೋಡೆ ಕುಸಿದು ಮೃತಪಟ್ಟ ಮಹಿಳೆಯ ಕುಟುಂಬಕ್ಕೆ 5 ಲಕ್ಷ ಪರಿಹಾರ ನೀಡಲಾಗುವುದು ಎಂದರು.
ಬೆಂಗಳೂರಿನಲ್ಲಿ ಸುರಿದ ಮಹಾಮಳೆ ಅವಾಂತರಕ್ಕೆ ಮೊದಲ ಬಲಿಯಾಗಿದೆ. ವರುಣಾರ್ಭಟಕ್ಕೆ ಗೋಡೆ ಕುಸಿದು ಬಿದ್ದು ಮಹಿಳಾ ಉದ್ಯೋಗಿಯೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಂಗಳೂರಿನ ವೈಟ್ ಫೀಲ್ಡ್ ನಲ್ಲಿ ಈ ದುರಂತ ಸಂಭವಿಸಿದೆ. ಶಶಿಕಲಾ (35) ಮೃತ ಮಹಿಳೆ. ಭಾರಿ ಮಳೆಯಿಂದಾಗಿ ಗೋಡೆ ಕುಸಿದು ಬಿದ್ದ ಪರಿಣಾಮ ಅವಶೇಷಗಳಡಿ ಸಿಲುಕಿ ಮಹಿಳೆ ಸಾವನ್ನಪ್ಪಿದ್ದಾರೆ. ಮೃತ ಶಶಿಕಲಾ ಖಾಸಗಿ ಕಂಪನಿಯ ಉದ್ಯೋಗಿಯಾಗಿದ್ದರು.
You Might Also Like
TAGGED:ಮಹಾಮಳೆ