ಸಿಇಟಿ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: ಮೇ 28 ರಿಂದ ಅಂಗವಿಕಲ ಅಭ್ಯರ್ಥಿಗಳ ವೈದ್ಯಕೀಯ ತಪಾಸಣೆ

ಬೆಂಗಳೂರು: ಇಂಜಿನಿಯರಿಂಗ್, ವೈದ್ಯಕೀಯ ಸೇರಿದಂತೆ ಇತರೆ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಸಲ್ಲಿಸಿರುವ ಸಿಇಟಿ ಅರ್ಜಿಯಲ್ಲಿ ವಿಕಲಚೇತನರ ಕೋಟಾ ಕ್ಲೇಮ್ ಮಾಡಿರುವ ಅಭ್ಯರ್ಥಿಗಳ ವೈದ್ಯಕೀಯ ತಪಾಸಣೆ ಮೇ 28 ರಿಂದ 30ರವರೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಚೇರಿಯಲ್ಲಿ ನಡೆಯಲಿದೆ.

ಅಭ್ಯರ್ಥಿಗಳು ಸೂಕ್ತ ದಿನಾಂಕ ಮತ್ತು ಸಮಯವನ್ನು ಮುಂಗಡವಾಗಿ ಕಾಯ್ದಿರಿಸಲು ಮೇ 26ರಂದು ಪ್ರಾಧಿಕಾರದ ವೆಬ್ಸೈಟ್ ನಲ್ಲಿ ಲಿಂಕ್ ಬಿಡುಗಡೆ ಮಾಡಲಾಗುವುದು. ವೈದ್ಯರ ಸಮಿತಿ ವತಿಯಿಂದ ವೈದ್ಯಕೀಯ ತಪಾಸಣೆ ಮಾಡಿ ಕ್ಲೇಮ್ ಪ್ರಕಾರ ಅರ್ಹರಾಗಿದ್ದಾರೆಯೇ ಎಂಬುದನ್ನು ತೀರ್ಮಾನಿಸಲಾಗುವುದು.

ನಮೂನಿಸಿದ ನ್ಯೂನತೆಗಳ ಪ್ರಕಾರ ಅರ್ಹರಾಗಿದ್ದಾರೆಯೇ ಎಂಬುದನ್ನು ಸಮಿತಿಯೇ ತೀರ್ಮಾನಿಸಲಿದೆ. ಅಭ್ಯರ್ಥಿಗಳು ಸೂಕ್ತ ದಾಖಲೆಗಳ ಸಹಿತ ತಪಾಸಣೆಗೆ ಹಾಜರಾಗುವಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read