ಬೆಂಗಳೂರು : ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಈ ಜಿಲ್ಲೆಗಳಲ್ಲಿ 3-4 ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರಿಗೆ ಇಂದು ಯಲ್ಲೋ ಅಲರ್ಟ್ ಘೋಷಿಸಲಾಗಿದ್ದು, . ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಚಿತ್ರದುರ್ಗ, ಹಾಸನ, ಕೊಡಗು, ತುಮಕೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಜಾರಿಯಾಗಿದೆ.
ಇಂದು ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಣೆಯಾಗಿದೆ.
ಬುಧವಾರ ಇಂದು ಉತ್ತರ ಕನ್ನಡ, ಶಿವಮೊಗ್ಗ, ಬೆಳಗಾವಿ, ಚಿಕ್ಕಮಗಳೂರು, ಜಿಲ್ಲೆಗಳಿಗೆ ರೆಡ್ ಅಲರ್ಟ್, ಉಡುಪಿ, ದಕ್ಷಿಣ ಕನ್ನಡ, ಹಾವೇರಿ, ಧಾರವಾಡ, ಚಿತ್ರದುರ್ಗ, ದಾವಣಗೆರೆ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಿಗೆ ಆರೆಂಜ್ ಘೋಷಿಸಲಾಗಿದೆ, ಮಳೆ ಸಂದರ್ಭದಲ್ಲಿ ಭಾರಿ ಗಾಳಿ ಬೀಸಲಿದ್ದು, ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.