BIG NEWS : ಬೆಂಗಳೂರಿನಲ್ಲಿ ಮಹಾಮಳೆ ಆರ್ಭಟ : ಹಲವು ರಸ್ತೆಗಳು ಜಲಾವೃತ, ಇಲ್ಲಿದೆ ಪರ್ಯಾಯ ಮಾರ್ಗ

ಬೆಂಗಳೂರು : ಬೆಂಗಳೂರಿನಲ್ಲಿ ಮಹಾಮಳೆ ಆರ್ಭಟ ಜೋರಾಗಿದ್ದು, ಹಲವು ರಸ್ತೆಗಳು ಜಲಾವೃತಗೊಂಡಿದ್ದು, ಸಂಚಾರ ಅಸ್ತವ್ಯಸ್ತವಾಗಿದೆ. ಈ ಹಿನ್ನೆಲೆ ಪೊಲೀಸರು ಬದಲಿ ಮಾರ್ಗ ಬಳಸುವಂತೆ ಮನವಿ ಮಾಡಿದ್ದಾರೆ.

ಮಡಿವಾಳ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಅಯ್ಯಪ್ಪ ಅಂಡರ್ ಪಾಸ್ ನಲ್ಲಿ ಮಳೆ ಬಂದಿದ್ದರಿಂದ ವಾಟರ್ ಲಾಗಿಂಗ್ ಆಗಿದ್ದು, ಹೊಸೂರು ಮುಖ್ಯರಸ್ತೆಯಲ್ಲಿ ನಗರದಿಂದ ಹೊರಭಾಗಕ್ಕೆ ಹೋಗುವ ಮತ್ತು ನಗರದ ಒಳಭಾಗಕ್ಕೆ ಬರುವ ಸಂಚಾರ ನಿಧಾನಗತಿಯಲ್ಲಿ ಸಾಗುತ್ತಿದ್ದು ವಾಹನ ಸವಾರರು ಬದಲಿ ರಸ್ತೆ ಬಳಸುವುದು ಎಂದು ಸೂಚನೆ ನೀಡಲಾಗಿದೆ.

ಹೊಸೂರು ಮುಖ್ಯರಸ್ತೆ ಮತ್ತು ಹೊರ ವರ್ತುಲ ರಸ್ತೆಯಲ್ಲಿ ವಾಟರ್ ಲಾಗಿಂಗ್ ಆಗಿದ್ದು ಸುಗಮ ಸಂಚಾರಕ್ಕೆ ಅಡಚಣೆಯಾಗಿರುವುದರಿಂದ ವಾಹನ ಸವಾರರು ಬದಲಿ ರಸ್ತೆಗಳನ್ನು ಬಳಸುವುದು ಮತ್ತು ಸಹಕರಿಸುವುದು
2)ಹೊರವರ್ತುಲ ರಸ್ತೆ:- ಮಡಿವಾಳ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಹೊರವರ್ತುಲ ರಸ್ತೆ ಸಿಲ್ಕ್ಬೋರ್ಡ್ ಜಂಕ್ಷನ್ ಬಳಿ ಹೆಚ್ಚಿನ ಮಳೆ ಬಂದು ನೀರು ನಿಲ್ಲುವ ಸಂದರ್ಭದಲ್ಲಿ ಈ ಕೆಳಕಂಡ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕಾಗಿರುತ್ತದೆ.

ಬನಶಂಕರಿ ಕಡೆಯಿಂದ ಬರುವ ವಾಹನಗಳನ್ನು ಈಸ್ಟ್ ಎಂಡ್ ಸರ್ಕಲ್ ಬಳಿ ಎಡ ತಿರುವು ಮಾಡಿಸಿ. ಸಾಗರ್ ಜಂಕ್ಷನ್ ಗೆ ಬಂದು ಬಲ ತಿರುವು ಮಾಡಿಸಿ ಬನ್ನೇರಘಟ್ಟ ರಸ್ತೆ ಮೂಲಕ ನಗರ ಪ್ರವೇಶ ಮಾಡಲು ಅನುವು ಮಾಡಿಕೊಡುವುದು.

ಇನ್ನೂ ಮುಂದೆ ಬಂದ ವಾಹನಗಳನ್ನು ಜಯದೇವ ಜಂಕ್ಷನ್ನಲ್ಲಿ ಎಡ ತಿರುವು ಮಾಡಿಸಿ ಬನ್ನೇರುಘಟ್ಟ ಮುಖ್ಯರಸ್ತೆ ಮೂಲಕ ನಗರ ಪ್ರವೇಶ ಮಾಡಲು ಅನುವು ಮಾಡಿಕೊಡುವುದು.

ಬಿ.ಟಿ.ಎಂ ಲೇಔಟ್ ಒಳಭಾಗದಿಂದ ಬರುವ ವಾಹನಗಳನ್ನು 16ನೇ ಮುಖ್ಯರಸ್ತೆಯಲ್ಲಿ ಎಡ ತಿರುವು ಮಾಡಿಸಿ ತಾವರೆಕೆರೆ ಮುಖ್ಯರಸ್ತೆ ಮೂಲಕ ಡಾ||ಮರಿಗೌಡ ರಸ್ತೆ, ಡೈರಿ ಸರ್ಕಲ್ ಮೂಲಕ ನಗರ ಪ್ರವೇಶ ಮಾಡಲು ಅನುವು ಮಾಡಿಕೊಡುವುದು.

ಹೊರವರ್ತುಲ ರಸ್ತೆ ಹೆಚ್.ಎಸ್.ಆರ್ ಕಡೆಯಿಂದ ಸಿಲ್ಕ್ಬೋರ್ಡ್ ಜಂಕ್ಷನ್ಗೆ ಬರುವ ವಾಹನಗಳನ್ನು 27ನೇ ಮೈನ್ ಜಂಕ್ಷನ್ನಲ್ಲಿ ಎಡ ತಿರುವು ಮಾಡಿಸಿ ಸೋಮಸುಂದರಪಾಳ್ಯ, ಮಂಗಮ್ಮನಪಾಳ್ಯ ಮೂಲಕ ಹೊಸೂರು ಮುಖ್ಯರಸ್ತೆಗೆ ಕಳುಹಿಸುವುದು ಹಾಗೆಯೇ ನಗರ ಪ್ರವೇಶಿಸುವ ವಾಹನಗಳನ್ನು ಬಲ ತಿರುವು ಮಾಡಿಸಿ ಆಟೋ ಮಾರ್ಟ್ ಜಂಕ್ಷನ್ ಸರ್ಜಾಪುರ ಮುಖ್ಯರಸ್ತೆ ಮೂಲಕ ಮಡಿವಾಳ ಚೆಕ್ಪೋಸ್ಟ್ ಜಂಕ್ಷನ್ ಗೆ ಬಂದು ನಗರ ಪ್ರವೇಶಕ್ಕೆ ಅನುವು ಮಾಡಿಕೊಡುವುದು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read