ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ವರುಣಾರ್ಭಟಕ್ಕೆ ಜನಜೀವನ ಅಲ್ಲೋಲಕಲ್ಲೋಲವಾಗಿದೆ. ಸಾವು-ನೋವುಗಳು ಸಂಭವಿಸುತ್ತಿವೆ. ನಿರಂತರವಾಗಿ ಸುರುಯುತ್ತಿರುವ ಮಳೆಗೆ ಜನರು ಕಂಗಾಲಾಗಿದ್ದಾರೆ. ಇದರ ಬೆನ್ನಲ್ಲೇ ಪ್ರತಿಕ್ರಿಯೆ ನೀಡಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಬೆಂಗಳೂರಿಗರು ಆತಂಕಪಡುವ ಅಗತ್ಯವಿಲ್ಲ. ಜನರ ಜೀವ, ಆಸ್ತಿ ರಕ್ಷಣೆಗೆ ಸರ್ಕಾರ ಬದ್ಧವಾಗಿದೆ ಎಂದಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಮಳೆ ಅವಾಂತರದಿಂದ ಅನಾಹುತಗಳನ್ನು ತಡೆಯುವ ನಿಟ್ಟಿನಲ್ಲಿ ಸರ್ಕಾರ ಹಾಗೂ ಅಧಿಕಾರಿಗಳು ಕಾರ್ಯೋನ್ಮುಖರಾಗಿದ್ದಾರೆ. ಈಗಾಗಲೇ ಬಿಬಿಎಂಪಿ ಅಧಿಕಾರಿಗಳು ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳು, ಇಲಾಖೆಗಳ ಜೊತೆ ಚರ್ಚಿಸಲಾಗಿದೆ ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ನಾಳೆ, ಎಲ್ಲಾ ಶಾಸಕರೊಂದಿಗೆ ಬೆಂಗಳೂರು ನಗರ ಪ್ರದಕ್ಷಿಣೆ ನಡೆಸಲಿದ್ದಾರೆ. ಮಳೆ ಹಾನಿ ಪ್ರದೇಶಕ್ಕೆ ಖುದ್ದು ಮುಖ್ಯಮಂತ್ರಿಗಳು ಅದಿಕಾರಿಗಳು, ಶಾಸಕರೊಂದಿಗೆ ತೆರಳಿ ಪರಿಶೀಲನೆ ಕೈಗೊಳ್ಳಲಿದ್ದಾರೆ. ಜನರು ಅತಂಕಪಡುವ ಅಗತ್ಯವಿಲ್ಲ. ಜನರ ಹಾಗೂ ಜನರ ಆಸ್ತಿ ರಕ್ಷಣೆಗೆ ಸರ್ಕಾರ ಬದ್ಧವಾಗಿದೆ ಎಂದರು.