ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ರಣಮಳೆ ಅನಾಹುತಗಳನ್ನು ಸೃಷ್ಟಿಸುತ್ತಿದೆ. ಬೆಂಗಳೂರು ಮಾತ್ರವಲ್ಲ ರಜಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಧಾರಾಕಾರ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ.
ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಸುರಿದ ಭಾರಿ ಮಳೆ ಅನಾಹುತಕ್ಕೆ ಐವರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಬೆಂಗಳೂರಿನಲ್ಲಿ ಮಹಾಮಳೆಯಿಂದಾಗಿ ನಿನ್ನೆ ಇಬ್ಬರು ಮೃತಪಟ್ಟಿದ್ದರು. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸುರಿಯುತ್ತಿರುವ ಮಳೆ ಸಂಬಂಧಿತ ಅವಘಡದಲ್ಲಿ ಈವರೆಗೆ ಐವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ರಾಜ್ಯದ ಐದು ಜಿಲ್ಲೆಗಳಲ್ಲಿ ಮುಂದಿನ 3 ಗಂಟೆಗಳಲ್ಲಿ ಭಾರಿ ಮಳೆಯಾಗಲಿದ್ದು, ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.