ಹೊಸಪೇಟೆ : ರಾಜ್ಯ ಸರ್ಕಾರದ ಸಾಧನಾ ಸಮಾವೇಶಕ್ಕೆ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಆಗಮಿಸಿದ್ದು, ಸಿಎಂ ಸಿದ್ದರಾಮಯ್ಯ ಸ್ವಾಗತ ಕೋರಿದ್ದಾರೆ.
ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ರಾಜ್ಯ ಸರ್ಕಾರದ ಎರಡು ವರ್ಷಗಳ “ಪ್ರಗತಿಯತ್ತ ಕರ್ನಾಟಕ – ಸಮರ್ಪಣಾ ಸಂಕಲ್ಪ” ಕಾರ್ಯಕ್ರಮಕ್ಕೆ ಆಗಮಿಸಿದ ಕಾಂಗ್ರೆಸ್ ವರಿಷ್ಠರು, ಲೋಕಸಭೆಯ ವಿರೋಧ ಪಕ್ಷದ ನಾಯಕರು ಆದ RahulGandhi ಹಾಗೂ ಎಐಸಿಸಿ ಅಧ್ಯಕ್ಷರು, ರಾಜ್ಯಸಭೆಯ ವಿಪಕ್ಷ ನಾಯಕರು ಆದ kharge ಅವರನ್ನು ವಿಮಾನ ನಿಲ್ದಾಣದಲ್ಲಿ ಆತ್ಮೀಯವಾಗಿ ಬರಮಾಡಿಕೊಂಡು, ಶುಭ ಕೋರಿದೆ ಎಂದು ಹಂಚಿಕೊಂಡಿದ್ದಾರೆ.
ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಇಂದು ಸಾಧನಾ ಸಮಾವೇಶ ನಡೆಯಲಿದ್ದು, ಲಕ್ಷಾಂತರ ಮಂದಿ ಭಾಗಿಯಾಗುವ ನಿರೀಕ್ಷೆಯಿದೆ.
ರಾಜ್ಯ ಸರ್ಕಾರದ ಎರಡು ವರ್ಷಗಳ "ಪ್ರಗತಿಯತ್ತ ಕರ್ನಾಟಕ – ಸಮರ್ಪಣಾ ಸಂಕಲ್ಪ" ಕಾರ್ಯಕ್ರಮಕ್ಕೆ ಆಗಮಿಸಿದ ಕಾಂಗ್ರೆಸ್ ವರಿಷ್ಠರು, ಲೋಕಸಭೆಯ ವಿರೋಧ ಪಕ್ಷದ ನಾಯಕರು ಆದ @RahulGandhi ಹಾಗೂ ಎಐಸಿಸಿ ಅಧ್ಯಕ್ಷರು, ರಾಜ್ಯಸಭೆಯ ವಿಪಕ್ಷ ನಾಯಕರು ಆದ @kharge ಅವರನ್ನು ವಿಮಾನ ನಿಲ್ದಾಣದಲ್ಲಿ ಆತ್ಮೀಯವಾಗಿ ಬರಮಾಡಿಕೊಂಡು, ಶುಭ ಕೋರಿದೆ. pic.twitter.com/TYVihfGLdu
— Siddaramaiah (@siddaramaiah) May 20, 2025