ದುನಿಯಾ ಡಿಜಿಟಲ್ ಡೆಸ್ಕ್ : ನ್ಯಾಯಮೂರ್ತಿ ಡಾ. ಹೆಚ್.ಎನ್.ನಾಗಮೋಹನ ದಾಸ್ ಅವರ ಏಕ ಸದಸ್ಯ ವಿಚಾರಣಾ ಆಯೋಗದ ನಿರ್ದೇಶನದಂತೆ ಪರಿಶಿಷ್ಟ ಜಾತಿ ಒಳ ಮೀಸಲಾತಿ ವರ್ಗೀಕರಣ ಸಮೀಕ್ಷೆ ಕಾರ್ಯವು ಪ್ರಸ್ತುತ ಪ್ರಗತಿಯಲ್ಲಿದೆ. ಮೇ 05 ರಿಂದ ಮನೆ-ಮನೆ ಸಮೀಕ್ಷೆ ನಡೆಸುತ್ತಿದ್ದು, ಸಮೀಕ್ಷೆಯಲ್ಲಿ ಒಂದು ವೇಳೆ ಕೈಬಿಟ್ಟು ಹೋದಂತಹ ಪರಿಶಿಷ್ಟ ಜಾತಿಯ ಕುಟುಂಬದವರು ಈ ಕೆಳಕಂಡಂತೆ ಆನ್‌ಲೈನ್ ಲಿಂಕ್ ಮೂಲಕ ಸ್ವಯಂಘೋಷಣೆ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.
*ಆನ್‌ಲೈನ್ ಮೂಲಕ ಸ್ವಯಂ ಘೋಷಣೆ:*
ಮನೆ-ಮನೆ ಭೇಟಿ ಸಂದರ್ಭದಲ್ಲಿ ತಮ್ಮ ಮಾಹಿತಿಯನ್ನು ನೀಡದವರು ನೇರವಾಗಿ ಆನ್‌ಲೈನ್ ಲಿಂಕ್ (https://schedulecastesurvey,karnataka.gov.in/selfdeclaraion) ರ ಮೂಲಕ ಮೇ 19 ರಿಂದ ಮೇ 28 ರವರೆಗೆ ಸ್ವಯಂಘೋಷಣೆ ಮಾಡಿಕೊಳ್ಳಲು ಕಲ್ಪಿಸಲಾಗಿದೆ.
ಆನ್‌ಲೈನ್‌ನಲ್ಲಿ ಸ್ವಯಂಘೋಷಣೆ ಹೇಗೆ ಮಾಡಿಕೊಳ್ಳಬೇಕು ಎಂಬುದರ ಬಗ್ಗೆ ಯೂಟ್ಯೂಬ್ ಲಿಂಕ್ (https://youtu.be/VASEcMhL930) ಮೂಲಕ ತಿಳಿದುಕೊಳ್ಳಬಹುದು.
ಎಲ್ಲಾ ಪ.ಜಾತಿ ಬಾಂದವರು ತಮ್ಮ ಜಾತಿ, ಉಪಜಾತಿ ವಿವರಗಳನ್ನು ದಾಖಲಾತಿಗಳನ್ನು ಉಪಯೋಗಿಸಿಕೊಳ್ಳಲು ಸ್ವಯಂದೃಢೀಕರಣ ಮಾಡಿಕೊಳ್ಳಬುಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಬಿ.ಮಲ್ಲಿಕಾರ್ಜುನ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.