ವಿಜಯನಗರ : ಕಾಂಗ್ರೆಸ್ ಅಧಿಕಾರದಲ್ಲಿರುವವರೆಗೂ ಗ್ಯಾರಂಟಿ ಯೋಜನೆಗಳು ಮುಂದುವರಿಯುತ್ತದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ.
ಹೊಸಪೇಟೆಯಲ್ಲಿ ನಡೆದ ಸಾಧನಾ ಸಮಾವೇಶದಲ್ಲಿ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ಮಾರ್ಗದರ್ಶನದಂತೆ ಕಾಂಗ್ರೆಸ್ ಅಧಿಕಾರದಲ್ಲಿರುವವರೆಗೂ ಗ್ಯಾರಂಟಿ ಯೋಜನೆಗಳು ಮುಂದುವರಿಯುತ್ತದೆ. ಯಾವುದೇ ಕಾರಣಕ್ಕೂ ಇವುಗಳನ್ನು ನಿಲ್ಲಿಸುವುದಿಲ್ಲ ಎಂದರು. ಟೀಕೆಗಳು ಸಾಯುತ್ತದೆ, ಕೆಲಸಗಳು ಉಳಿಯುತ್ತದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ನಾವಿಂದು ಎರಡು ವರ್ಷಗಳ ಸಂಭ್ರಮಾಚರಣೆ ಮಾಡಲು ಇಲ್ಲಿಗೆ ಬಂದಿಲ್ಲ. ಜನರ ಋಣ ತೀರಿಸಲು ಸಮರ್ಪಣೆಯ ಸಂಕಲ್ಪದೊಂದಿಗೆ ಆರನೇ ಗ್ಯಾರಂಟಿಯಾದ ಭೂ ಗ್ಯಾರಂಟಿ ಯೋಜನೆ ನೀಡುತ್ತಿದ್ದೇವೆ ಎಂದರು.
ನಾಡಿನ ಮತದಾರರ ಆಶೀರ್ವಾದದಿಂದ ಭರ್ಜರಿ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿರುವ ರಾಜ್ಯ ಸರ್ಕಾರಕ್ಕೆ ಇಂದಿಗೆ ಎರಡು ವರ್ಷಗಳ ಸಂಭ್ರಮ. ಇದರ ಅಂಗವಾಗಿ ಇಂದು ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಆಯೋಜಿಸಿದ್ದ ” ಪ್ರಗತಿಯತ್ತ ಕರ್ನಾಟಕ – ಸಮರ್ಪಣೆ ಸಂಕಲ್ಪ” ಬೃಹತ್ ಜನಸಮಾವೇಶದಲ್ಲಿ ರಾಹುಲ್ ಗಾಂಧಿ, ಖರ್ಗೆ, ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ಮಾರ್ಗದರ್ಶನದಂತೆ ಕಾಂಗ್ರೆಸ್ ಅಧಿಕಾರದಲ್ಲಿರುವವರೆಗೂ ಗ್ಯಾರಂಟಿ ಯೋಜನೆಗಳು ಮುಂದುವರಿಯುತ್ತದೆ. ಯಾವುದೇ ಕಾರಣಕ್ಕೂ ಇವುಗಳನ್ನು ನಿಲ್ಲಿಸುವುದಿಲ್ಲ.
— Karnataka Congress (@INCKarnataka) May 20, 2025
– @DKShivakumar #ಪ್ರಗತಿಯತ್ತ_ಕರ್ನಾಟಕ#2yearsofguaranteesarkara pic.twitter.com/aIskYw0XBU