ಬೆಂಗಳೂರು: ಬೆಂಗಳೂರಿನ ಆರ್.ಆರ್.ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ತನಿಖೆಗೆ ಗ್ರೀನ್ ಸಿಗ್ನಲ್ ಸಿಕ್ಕಿದೆ.
ಭ್ರಷ್ಟಾಚಾರ, ಲಂಚ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ವೈಯ್ಯಾಲಿಕಾವಲ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಕ್ಷಮ ಪ್ರಾಧಿಕಾರ ಮುನಿರತ್ನ ವಿರುದ್ಧ ತನಿಖೆಗೆ ಅನುಮತಿ ನೀಡಿದೆ.
ಮುನಿರತ್ನ ವಿರುದ್ಧ 36 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟು, 20 ಲಕ್ಷ ಸ್ವೀಕರಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವೈಯ್ಯಾಲಿಕಾವಲ್ ಠಾಣೆಯಲ್ಲಿ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ 1998ರ ಅಡಿ ಕೇಸ್ ದಾಖಲಾಗಿತ್ತು. ಈ ಪ್ರಕರಣದ ಬಗ್ಗೆ ತನಿಖೆಗೆ ಸಕ್ಷಮ ಪ್ರಾಧಿಕಾರ ಅನುಮತಿ ನೀಡಿದೆ.