ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕರಾವಳಿ ತೀರದಲ್ಲಿ ಜೂನ್ 1ರಿಂದ ಮೀನುಗಾರಿಕೆ ನಿಷೇಧಿಸಲಾಗಿದೆ.
ಯಾವುದೇ ಬಲೆ ಅಥವಾ ಸಾಧನ ಬಳಸಿಕೊಂಡು ಎಲ್ಲಾ ರೀತಿಯ ಯಾಂತ್ತೀಕೃತ ದೋಣಿಗಳ ಮೂಲಕ ಮತ್ತು 10 ಹೆಚ್.ಪಿ. ಸಾಮರ್ಥ್ಯಕ್ಕಿಂತ ಮೇಲ್ಪಟ್ಟ ಮೋಟಾರಿಕೃತ ದೋಣಿ ಸಾಂಪ್ರದಾಯಿಕ ದೋಣಿಗಳ ಮೂಲಕ ಕೈಗೊಳ್ಳುವ ಮೀನುಗಾರಿಕೆ ಚಟುವಟಿಕೆಯನ್ನು ಜೂನ್ 1ರಿಂದ ಜಾರಿಗೆ ಬರುವಂತೆ ನಿಷೇಧಿಸಲಾಗಿದೆ.
ಜೂನ್ 1ರಿಂದ ಜುಲೈ 31ರವರೆಗೆ ಮೀನುಗಾರಿಕೆ ಚಟುವಟಿಕೆ ನಿಷೇಧಿಸಲಾಗಿದೆ. ದೋಣಿ ಸಾಗಿಸುವ ಉದ್ದೇಶಕ್ಕೆ 10 ಹೆಚ್.ಪಿ.ವರೆಗಿನ ಸಾಮರ್ಥ್ಯದ ಮೋಟಾರಿಕೃತ ಇಂಜಿನ್ ಮತ್ತು ಸಾಂಪ್ರದಾಯಿಕ ನಾಡದೋಣಿಗಳ ಮೂಲಕ ಮೀನುಗಾರಿಕೆ ನಡೆಸಲು ಅನುಮತಿ ನೀಡಲಾಗಿದೆ. ಮೀನುಗಾರಿಕೆ ನಿಷೇಧಿಸಲಾದ ಸರ್ಕಾರದ ಆದೇಶ ಉಲ್ಲಂಘಿಸುವ ಮೀನುಗಾರಿಕೆ ದೋಣಿಗಳು ಮತ್ತು ಮೀನುಗಾರರನ್ನು ಕಡಲ ಕರ್ನಾಟಕ ಕಡಲ ಮೀನುಗಾರಿಕೆ ಕಾಯ್ದೆ 1986ರ ಅನ್ವಯ ದಂಡನೆಗೆ ಗುರಿಪಡಿಸಲಾಗುವುದು ಎಂದು ಹೇಳಲಾಗಿದೆ.