HomeLatest Newsಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ: ರಾಜ್ಯದಲ್ಲಿ ಭಾರಿ ಮಳೆ ಮುನ್ಸೂಚನೆ: 7 ಜಿಲ್ಲೆಗಳಿಗೆ 'ರೆಡ್ ಅಲರ್ಟ್'...

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ: ರಾಜ್ಯದಲ್ಲಿ ಭಾರಿ ಮಳೆ ಮುನ್ಸೂಚನೆ: 7 ಜಿಲ್ಲೆಗಳಿಗೆ ‘ರೆಡ್ ಅಲರ್ಟ್’ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ರಾಜ್ಯದಲ್ಲಿ ಇನ್ನೂ ಎರಡು ಮೂರು ದಿನಗಳ ಕಾಲ ಭಾರಿ ಮಳೆ ಮುಂದುವರೆಯುವ ಸಾಧ್ಯತೆಯಿದ್ದು, ಕರಾವಳಿಯ ಮೂರು ಜಿಲ್ಲೆಗಳು ಸೇರಿದಂತೆ ಒಟ್ಟು ಏಳು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನಲೆ ರೆಡ್ ಅಲರ್ಟ್ ನೀಡಲಾಗಿದೆ.

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಲಕ್ಷಣಣ ಕಂಡುಬರುತ್ತಿವೆ. ಕರಾವಳಿ ಜಿಲ್ಲೆಗಳಲ್ಲಿ ಮುಂಗಾರು ಚುರುಕಾಗಿದೆ. ಮುಂದಿನ ವಾರ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಮೇ 21ರಂದು ಮೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ನೀಡಲಾಗಿದೆ.

ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ಮುಂದಿನ ಎರಡು ದಿನ, ಹಾಸನ ಮತ್ತು ಕೊಡಗು ಜಿಲ್ಲೆಗಳಿಗೆ ಮುಂದಿನ 24 ಗಂಟೆಗೆ ರೆಡ್ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಉಳಿದಂತೆ ಧಾರವಾಡ, ಬೆಳಗಾವಿ, ಗದಗ, ಹಾವೇರಿ, ದಾವಣಗೆರೆ, ಮೈಸೂರು ಜಿಲ್ಲೆಗಳಿಗೆ ಮುಂದಿನ ಎರಡು ದಿನಕ್ಕೆ ಆರೆಂಜ್ ಅಲರ್ಟ್ ನೀಡಲಾಗಿದೆ.

ರಾಮನಗರ, ಕೋಲಾರ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೊಪ್ಪಳ, ವಿಜಯಪುರ, ಬೀದರ್, ಕಲಬುರಗಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular