HomeLatest News ಆಸ್ತಿ ಖರೀದಿ, ಮಾರಾಟಗಾರರ ಗಮನಕ್ಕೆ: ಮಂಗಳವಾರ ಸಬ್ ರಿಜಿಸ್ಟ್ರಾರ್ ಕಚೇರಿಗೆ ರಜೆ ದಿನ

 ಆಸ್ತಿ ಖರೀದಿ, ಮಾರಾಟಗಾರರ ಗಮನಕ್ಕೆ: ಮಂಗಳವಾರ ಸಬ್ ರಿಜಿಸ್ಟ್ರಾರ್ ಕಚೇರಿಗೆ ರಜೆ ದಿನ

ಬೆಂಗಳೂರು: ಸರದಿಯಂತೆ ಎರಡನೇ ಮತ್ತು ನಾಲ್ಕನೇ ಶನಿವಾರ ಹಾಗೂ ಭಾನುವಾರ ರಜಾ ದಿನಗಳಂದು ಕಾರ್ಯನಿರ್ವಹಿಸುವ ಉಪ ನೋಂದಣಾಧಿಕಾರಿ ಕಚೇರಿಗಳಿಗೆ ಮಂಗಳವಾರ ರಜಾ ದಿನವಾಗಿರುತ್ತದೆ.

ರಾಜ್ಯದ ಪ್ರತಿಯೊಂದು ಜಿಲ್ಲಾ ನೋಂದಣಿ ಕಚೇರಿ ವ್ಯಾಪ್ತಿಯಲ್ಲಿರುವ ಉಪ ನೋಂದಣಾಧಿಕಾರಿ ಕಚೇರಿಗಳು ಸರದಿಯಂತೆ ಎರಡನೇ ಮತ್ತು ನಾಲ್ಕನೇ ಶನಿವಾರ ಮತ್ತು ಭಾನುವಾರ ರಜಾ ದಿನಗಳಂದು ಕಾರ್ಯ ನಿರ್ವಹಿಸಬೇಕಿದೆ. ಯಾವ ಕಚೇರಿ ಆಯಾ ವಾರದ ರಜಾ ದಿನದಂದು ತೆರೆದಿರುತ್ತದೆಯೋ ಆ ಕಚೇರಿಗೆ ಮುಂದಿನ ಮಂಗಳವಾರ ರಜೆ ಇರುತ್ತದೆ ಎಂದು ಕಂದಾಯ ಇಲಾಖೆ ಆದೇಶದಲ್ಲಿ ತಿಳಿಸಲಾಗಿದೆ.

ಪ್ರತಿ ಜಿಲ್ಲಾ ನೋಂದಣಿ ಕಚೇರಿಯ ವ್ಯಾಪ್ತಿಯಲ್ಲಿನ ಸ್ವತ್ತುಗಳನ್ನು ಆ ವ್ಯಾಪ್ತಿಯ ಯಾವುದೇ ಉಪ ನೋಂದಣಾಧಿಕಾರಿ ಕಚೇರಿಯಲ್ಲಿ ನೋಂದಣಿ ಮಾಡಿಸಬಹುದಾಗಿದೆ. ಈ ನಿಯಮ ಜಾರಿಯಾದ ಬಳಿಕ ಸರದಿಯಂತೆ ಒಂದು ಉಪ ನೋಂದಣಾಧಿಕಾರಿ ಕಚೇರಿ ರಜಾ ದಿನಗಳಲ್ಲಿಯೂ ಕಾರ್ಯನಿರ್ವಹಿಸುತ್ತದೆ. ಇದರಿಂದ ವರ್ಷದ 355 ದಿನವೂ ನೋಂದಣಿಗೆ ಅವಕಾಶ ಸಿಕ್ಕಿದ್ದು, ಸರದಿಯಂತೆ ಎರಡನೇ ಮತ್ತು ನಾಲ್ಕನೇ ಶನಿವಾರ ಹಾಗೂ ಭಾನುವಾರ ರಜಾ ದಿನಗಳಂದು ಕಾರ್ಯನಿರ್ವಹಿಸುವ ಉಪ ನೋಂದಣಾಧಿಕಾರಿ ಕಚೇರಿಗಳಿಗೆ ಮಂಗಳವಾರ ರಜಾ ದಿನವಾಗಿರುತ್ತದೆ ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular