ಬೆಂಗಳೂರು : ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವರುಣಾರ್ಭಟ ಜೋರಾಗಿದ್ದು, ಹಲವು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ಥಗೊಂಡಿದೆ. ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುತ್ತಿದ್ದು, ರಸ್ತೆಗಳು ಜಲಾವೃತಗೊಂಡಿವೆ.
ಕರಾವಳಿ ಭಾಗದಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಉತ್ತರ ಕನ್ನಡ ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಜಿಲ್ಲಾಡಳಿತ ಎಲ್ಲಾ ಅಂಗನವಾಡಿಗಳಿಗೆ ರಜೆ ಘೋಷಿಸಿದೆ.
ಜಡಿ ಮಳೆಗೆ ಉಡುಪಿ ಜಿಲ್ಲೆಯ ಜನರು ತತ್ತರಿಸಿದ್ದಾರೆ. ಪ್ರವಾಹದಂತೆ ಹೆದ್ದಾರಿ ಮೇಲೆ ನೀರು ಉಕ್ಕಿ ಹರಿಯುತ್ತಿದ್ದು, ಅಂಗಡಿಗಳಿಗೆ ಮಣ್ಣು ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ಸಂಚಾರ ಮಾರ್ಗವಿಲ್ಲದೇ ವಾಹನ ಸವರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.
You Might Also Like
TAGGED:ರಜೆ ಘೋಷಣೆ