ರಾಯಚೂರು: ಮೊಬೈಲ್ ನಲ್ಲಿ ಮಾತನಾಡುತ್ತಿದ್ದಾಗಲೇ ಸಿಡಿಲು ಬಡಿದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಲಿಂಗದಹಳ್ಳಿ ಸಮೀಪ ನಡೆದಿದೆ.
ದೇವಕಿ ಮ್ಯಾಗೇರಿ(40) ಮೃತಪಟ್ಟ ಮಹಿಳೆ ಎಂದು ಹೇಳಲಾಗಿದೆ. ನಿನ್ನೆ ಸಂಜೆ ಮಳೆ ಬರುವ ಸಂದರ್ಭದಲ್ಲಿ ದೇವಕಿ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದರು. ಈ ವೇಳೆ ಅವರು ಮೊಬೈಲ್ ನಲ್ಲಿ ಮಾತನಾಡುತ್ತಿದ್ದಾಗಲೇ ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ. ಮಳೆ ನಿಂತ ನಂತರ ಗ್ರಾಮಸ್ಥರು ಸ್ಥಳಕ್ಕೆ ಓಡಿ ಹೋಗಿ ನೋಡಿದಾಗ ಸಿಡಿಲು ಬಡಿದು ದೇವಕಿ ಮೃತಪಟ್ಟಿರುವುದು ಗೊತ್ತಾಗಿದೆ.