HomeLatest Newsಅಪಘಾತದಲ್ಲಿ ನವ ವಿವಾಹಿತ ಸಾವು: ಮುಗಿಲು ಮುಟ್ಟಿದ ಕುಟುಂಬದವರ ಆಕ್ರಂದನ

ಅಪಘಾತದಲ್ಲಿ ನವ ವಿವಾಹಿತ ಸಾವು: ಮುಗಿಲು ಮುಟ್ಟಿದ ಕುಟುಂಬದವರ ಆಕ್ರಂದನ

ಶಿವಮೊಗ್ಗ: ಬೈಕ್ ನಿಯಂತ್ರಣ ತಪ್ಪಿ ಬಿದ್ದು ನವ ವಿವಾಹಿತ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆ ಸೊರಬ ತಾಲೂಕಿನ ಹರೂರು ಗ್ರಾಮದ ಕೆರೆ ಏರಿ ಮೇಲೆ ಸೋಮವಾರ ರಾತ್ರಿ ನಡೆದಿದೆ.

ಸೊರಬ ತಾಲೂಕಿನ ಕುಂಶಿ ಗ್ರಾಮದ ಎಸ್.ಆರ್. ರವಿ(29) ಮೃತಪಟ್ಟ ಯುವಕ. ಸಾಗರದಿಂದ ಕೂಲಿ ಕೆಲಸ ಮುಗಿಸಿಕೊಂಡು ಗ್ರಾಮಕ್ಕೆ ಬರುವಾಗ ನಾಯಿ ಅಡ್ಡ ಬಂದಿದೆ. ಈ ವೇಳೆ ನಿಯಂತ್ರಣ ತಪ್ಪಿದ ಬೈಕ್ ಮೋರಿ ಕಟ್ಟೆಗೆ ಡಿಕ್ಕಿ ಹೊಡೆದು ಸ್ಥಳದಲ್ಲಿಯೇ ರವಿ ಮೃತಪಟ್ಟಿದ್ದಾರೆ.

ಒಂದು ತಿಂಗಳು ಎಂಟು ದಿನದ ಹಿಂದೆಯಷ್ಟೇ ರವಿ ಮದುವೆಯಾಗಿತ್ತು. ಅವರ ಸಾವಿನಿಂದ ಕುಟುಂಬದವರು ಕಂಗಾಲಾಗಿದ್ದು, ಆಕ್ರಂದನ ಮುಗಿಲು ಮುಟ್ಟುವಂತಿತ್ತು. ರವಿ ಅವರ ಸಾವು ಗ್ರಾಮದಲ್ಲಿ ಸೂತಕದ ವಾತಾವರಣ ನಿರ್ಮಿಸಿದೆ. ಮೃತರಿಗೆ ಪತ್ನಿ, ತಂದೆ, ತಾಯಿ, ಅಣ್ಣ, ಅತ್ತಿಗೆ ಇದ್ದಾರೆ. ಸೊರಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular