ವಿಜಯಪುರ : ವಿಜಯಪುರದಲ್ಲಿ ಕಾರು-ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಸಾವಿನ ಸಂಖ್ಯೆ 6 ಕ್ಕೇರಿಕೆಯಾಗಿದೆ.
ವೇಗವಾಗಿ ಬಂದ ಮಹೇಂದ್ರ ಕಾರು ಡಿವೈಡರ್ ಗೆ ಡಿಕ್ಕಿಯಾಗಿ ಹಾರಿ ಬಸ್ ಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಕಾರಿನಲ್ಲಿದ್ದಐವರು ಮೃತಪಟ್ಟು ಹಲವರು ಗಾಯಗೊಂಡಿದ್ದರು. ಇದೀಗ ಗಂಭೀರವಾಗಿ ಗಾಯಗೊಂಡಿದ್ದ ಬಸ್ ಚಾಲಕ ಕೂಡ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ.
ಮಹೇಂದ್ರ ಎಕ್ಸ್ ಯುವಿ ಕಾರು, ಕಂಟೇನರ್ , ಖಾಸಗಿ ಬಸ್ ನಡುವೆ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಜಯಪುರದತ್ತ ಪ್ರಯಾಣಿಸುತ್ತಿದ್ದ ಮಹೀಂದ್ರಾ ಕಾರು ಡಿವೈಡರ್ ಹಾರಿ ಎದುರಿಗೆ ಬರುತ್ತಿದ್ದ ಖಾಸಗಿ ಬಸ್ ಗೆ ಡಿಕ್ಕಿಯಾಗಿದೆ. ನಿಯಂತ್ರಣ ತಪ್ಪಿದ ಬಸ್ ರಸ್ತೆ ಬದಿಗೆ ನಿಂತಿದ್ದ ಕಂಟೇನರ್ ಗೆ ಡಿಕ್ಕಿಯಾಗಿದೆ. ಮಹೇಂದ್ರಾ ಕಾರಿನಲ್ಲಿ ತೆಲಂಗಾಣ ಮೂಲದ ಪಿ ಬಾಸ್ಕರ್ ಎಂಬುವವರ ಕುಟುಂಬದವರು ಪ್ರಯಾಣಿಸುತ್ತಿದ್ದರು.
You Might Also Like
TAGGED:ವಿಜಯಪುರ