BREAKING : ರೇಣುಕಾಸ್ವಾಮಿ ಕೊಲೆ ಕೇಸ್ :   ಸುಪ್ರೀಂಕೋರ್ಟ್’ನಲ್ಲಿ ನಟ ದರ್ಶನ್ ಜಾಮೀನು ರದ್ದು ಅರ್ಜಿ ವಿಚಾರಣೆ ಮುಂದೂಡಿಕೆ.!

ನವದೆಹಲಿ : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನಲ್ಲಿ ನಟ ದರ್ಶನ್ ಜಾಮೀನು ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮುಂದೂಡಿಕೆಯಾಗಿದೆ ಎಂಬ ಮಾಹಿತಿ ಲಭ‍್ಯವಾಗಿದೆ. ಬೇಸಿಗೆ ರಜೆ ಬಳಿಕ ಸುಪ್ರೀಂಕೋರ್ಟ್ ವಿಚಾರಣೆ ನಡೆಸಲಿದೆ. ಜುಲೈ 14 ಕ್ಕೆ ಸುಪ್ರೀಂಕೋರ್ಟ್ ಬೇಸಿಗೆ ರಜೆ ಅಂತ್ಯವಾಗಲಿದೆ.

ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಜಾಮೀನು ರದ್ದು ಕೋರಿ ಸರ್ಕಾರ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂಕೋರ್ಟ್ ಮುಂದೂಡಿದೆ. ವಾದ ವಿವಾದ ಆಲಿಸಿದ ಕೋರ್ಟ್ ನಟ ದರ್ಶನ್ ಜಾಮೀನು ರದ್ದು ಅರ್ಜಿ ವಿಚಾರಣೆಯನ್ನು ಮುಂದೂಡಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಹೈಕೋರ್ಟ್ ಎಲ್ಲಾ ಆರೋಪಿಗಳಿಗೆ ಜಾಮೀನು ನೀಡಿತ್ತು. ಜಾಮೀನು ಆದೇಶವನ್ನು ರದ್ದುಗೊಳಿಸುವಂತೆ ಪೊಲೀಸರು ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು.

ದರ್ಶನ್ ಅವರ ಜಾಮೀನು ರದ್ದು ಕೋರಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿತ್ತು. ಕೊಲೆ ಪ್ರಕರಣದಲ್ಲಿ 7 ಆರೋಪಿಗಳ ಜಾಮೀನು ರದ್ದು ಕೋರಿ ರಾಜ್ಯ ಸರ್ಕಾರ ಅರ್ಜಿ ಸಲ್ಲಿಸಿದೆ. ಆರೋಪಿಗಳಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಡಿಸೆಂಬರ್ 2024ರಲ್ಲಿ ಹೈಕೋರ್ಟ್ ಜಾಮೀನು ನೀಡಿದ್ದು, ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ ಗೆ ಸರ್ಕಾರ ಮೇಲ್ಮನವಿ ಸಲ್ಲಿಸಿದ್ದು, ಇಂದು ಸುಪ್ರೀಂ ಕೋರ್ಟ್ ಅರ್ಜಿಯ ವಿಚಾರಣೆ ನಡೆಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read