BIG NEWS : ಕನ್ನಡ ಮಾತನಾಡಲ್ಲ ಎಂದಿದ್ದ ‘SBI’ ಲೇಡಿ ಮ್ಯಾನೇಜರ್ ಎತ್ತಂಗಡಿ |WATCH VIRAL VIDEO

ಬೆಂಗಳೂರು : ಎಂದಿಗೂ ನಾನು ಕನ್ನಡ ಮಾತನಾಡುವುದೇ ಇಲ್ಲʼ ಎಂದು ಬೆಂಗಳೂರಿನ ಚಂದಾಪುರದ ಎಸ್ಬಿಐ ಬ್ಯಾಂಕ್ ಲೇಡಿ ಮ್ಯಾನೇಜರ್ ದರ್ಪ ತೋರಿದ್ದರು. ಈ ವಿಡಿಯೋ ವೈರಲ್ ಭಾರಿ ವೈರಲ್ ಆಗಿದ್ದು, ಆಕ್ರೋಶ ಭುಗಿಲೆದ್ದ ಬೆನ್ನಲ್ಲೇ ಮಹಿಳೆ ಕನ್ನಡಿಗರ ಕ್ಷಮೆ ಕೇಳಿದ್ದರು. ಅಲ್ಲದೇ ಲೇಡಿ ಮ್ಯಾನೇಜರನ್ನು ವರ್ಗಾವಣೆ ಮಾಡಬೇಕೆಂದು ಆಗ್ರಹಿಸಲಾಗಿತ್ತು. ಕೊನೆಗೂ ಈ ಅಧಿಕಾರಿಯನ್ನು ವರ್ಗಾವಣೆ ಮಾಡಲಾಗಿದೆ.

ಈ ಬಗ್ಗೆ ಕನ್ನಡಪರ ಸಂಘಟನೆಗಳು ಎಸ್ ಬಿ ಐ ಹೆಡ್ ಆಫೀಸ್ ಜನರಲ್ ಮ್ಯಾನೇಜರ್ ಸುಶೀಲ್ ಕುಮಾರ್ ಅವರಿಗೆ ಮನವಿ ಸಲ್ಲಿಸಿದ್ದರು. ಮನವಿ ಸ್ವೀಕರಿಸಿದ ಅವರು ಬ್ಯಾಂಕ್ ಮ್ಯಾನೇಜರ್ ವರ್ಗಾವಣೆ ಮಾಡಿದ್ದಾರೆ.

ಸಿಎಂ ಸಿದ್ದರಾಮಯ್ಯ ಟ್ವೀಟ್

ಆನೇಕಲ್ ತಾಲ್ಲೂಕಿನ ಸೂರ್ಯನಗರದಲ್ಲಿರುವ ಎಸ್‌ಬಿಐ ಶಾಖಾ ವ್ಯವಸ್ಥಾಪಕರು ಕನ್ನಡ ಮತ್ತು ಇಂಗ್ಲಿಷ್‌ನಲ್ಲಿ ಮಾತನಾಡಲು ನಿರಾಕರಿಸಿ ನಾಗರಿಕರನ್ನು ಕಡೆಗಣಿಸುತ್ತಿರುವುದು ತೀವ್ರವಾಗಿ ಖಂಡನೀಯ.ಅಧಿಕಾರಿಯನ್ನು ವರ್ಗಾವಣೆ ಮಾಡುವಲ್ಲಿ ಎಸ್‌ಬಿಐನ ತ್ವರಿತ ಕ್ರಮವನ್ನು ನಾವು ಪ್ರಶಂಸಿಸುತ್ತೇವೆ. ಈ ವಿಷಯವನ್ನು ಈಗ ಮುಕ್ತಾಯಗೊಳಿಸಲಾಗಿದೆ ಎಂದು ಪರಿಗಣಿಸಬಹುದು.

ಆದಾಗ್ಯೂ, ಅಂತಹ ಘಟನೆಗಳು ಮರುಕಳಿಸಬಾರದು. ಎಲ್ಲಾ ಬ್ಯಾಂಕ್ ಉದ್ಯೋಗಿಗಳು ಗ್ರಾಹಕರನ್ನು ಘನತೆಯಿಂದ ನಡೆಸಿಕೊಳ್ಳಬೇಕು ಮತ್ತು ಸ್ಥಳೀಯ ಭಾಷೆಯಲ್ಲಿ ಮಾತನಾಡಲು ಎಲ್ಲ ಪ್ರಯತ್ನಗಳನ್ನು ಮಾಡಬೇಕು.

ಭಾರತದಾದ್ಯಂತ ಎಲ್ಲಾ ಬ್ಯಾಂಕ್ ಸಿಬ್ಬಂದಿಗೆ ಸಾಂಸ್ಕೃತಿಕ ಮತ್ತು ಭಾಷಾ ಸಂವೇದನಾ ತರಬೇತಿಯನ್ನು ಕಡ್ಡಾಯಗೊಳಿಸಬೇಕೆಂದು ನಾನು ಹಣಕಾಸು ಸೇವೆಗಳ ಇಲಾಖೆಯನ್ನು ಒತ್ತಾಯಿಸುತ್ತೇನೆ. ಸ್ಥಳೀಯ ಭಾಷೆಯನ್ನು ಗೌರವಿಸುವುದು ಎಂದರೆ ಜನರನ್ನು ಗೌರವಿಸುವುದು ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read