BREAKING: ಬೆಂಗಳೂರಿನಲ್ಲಿ ಮಳೆ ಅವಾಂತರಕ್ಕೆ ಮತ್ತೊಬ್ಬರು ಬಲಿ: ಬೈಕ್ ನಲ್ಲಿ ತೆರಳುವಾಗ ಮರ ಬಿದ್ದು ಸವಾರ ಸ್ಥಳದಲ್ಲೇ ಸಾವು

ಬೆಂಗಳೂರು: ಬೆಂಗಳೂರು ನಗರದಲ್ಲಿ ಮಳೆ ಅವಾಂತರಕ್ಕೆ ಮತ್ತೊಬ್ಬರು ಬಲಿಯಾಗಿದ್ದಾರೆ. ಬೈಕ್ ನಲ್ಲಿ ತೆರಳುತ್ತಿದ್ದಾಗ ಮರ ಬಿದ್ದು ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಕೋರಮಂಗಲದಲ್ಲಿ ಘಟನೆ ನಡೆದಿದೆ. ಆಡುಗೋಡಿ ನಿವಾಸಿ ಮೂಡಲಗಿರಿ(50) ಮೃತಪಟ್ಟ ಬೈಕ್ ಸವಾರ ಎಂದು ಹೇಳಲಾಗಿದೆ. ಎಲೆಕ್ಟ್ರಿಷಿಯನ್ ಆಗಿ ಕೆಲಸ ಮಾಡುತ್ತಿದ್ದ ಮೂಡಲಗಿರಿ ಅವರು ಕೋರಮಂಗಲದಲ್ಲಿ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆಯಲ್ಲೇ ಮರ ಬಿದ್ದು ಮೃತಪಟ್ಟಿದ್ದಾರೆ.

ಇದರೊಂದಿಗೆ ಬೆಂಗಳೂರಿನಲ್ಲಿ ಮಳೆ ಅವಾಂತರದಿಂದ ನಾಲ್ವರು ಮೃತಪಟ್ಟಿದ್ದಾರೆ. ಎಂಎಸ್ ಪಾಳ್ಯದ ಅಪಾರ್ಟ್ಮೆಂಟ್ ಬೇಸ್ ಮೆಂಟ್ ನಲ್ಲಿ ನಲ್ಲಿ ನೀರು ಹೊರ ಹಾಕುವಾಗ ವಿದ್ಯುತ್ ಶಾಕ್ ನಿಂದ ಮನಮೋಹನ ಕಾಮತ್ ಮತ್ತು ದಿನೇಶ್ ಮೃತಪಟ್ಟಿದ್ದರು. ವೈಟ್ ಫೀಲ್ಡ್ ನಲ್ಲಿ ಗೋಡೆ ಕುಸಿದು ಮಹಿಳೆ ಸಾವನ್ನಪ್ಪಿದ್ದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read