BIG NEWS : 2025-26 ನೇ ಸಾಲಿಗೆ RTE ಅಡಿ 1-6 ನೇ ತರಗತಿಗೆ ಪ್ರವೇಶ ಪ್ರಕ್ರಿಯೆ : ಶಿಕ್ಷಣ ಇಲಾಖೆಯಿಂದ ಮಹತ್ವದ ಮಾಹಿತಿ.!

ಬೆಂಗಳೂರು : ಶೈಕ್ಷಣಿಕ ವರ್ಷದ ಜೂನ್ 01ನೇ ತಾರೀಖಿಗೆ 06 ವರ್ಷಗಳು ಪೂರ್ಣಗೊಂಡಿರುವ ಮಗುವನ್ನು 01ನೇ ತರಗತಿಗೆ ದಾಖಲಿಸಲು ವಯೋಮಿತಿಯನ್ನು 01 ಬಾರಿಯ ಕ್ರಮವಾಗಿ ಸಡಿಲಿಕೆ ನೀಡಿ ಪೂರ್ವ ಪ್ರಾಥಮಿಕ ಶಿಕ್ಷಣ ಪೂರ್ಣಗೊಳಿಸಿರುವ ಹಾಗೂ ಜೂನ್ 01ನೇ ತಾರೀಖಿಗೆ 05 ವರ್ಷ 05 ತಿಂಗಳು ಪೂರ್ಣಗೊಂಡಿರುವ ಮಕ್ಕಳನ್ನು 2025-26ನೇ ಶೈಕ್ಷಣಿಕ ವರ್ಷಕ್ಕೆ ಮಾತ್ರ 01ನೇ ತರಗತಿಗೆ ದಾಖಲು ಮಾಡಿಕೊಳ್ಳಲು ಆದೇಶಿಸಲಾಗಿದೆ.

ಆದ್ದರಿಂದ ಸರ್ಕಾರದ ಆದೇಶದಂತೆ 2025 ರ ಜೂನ್ 01ನೇ ತಾರೀಖಿಗೆ 05 ವರ್ಷ 05 ತಿಂಗಳು ಪೂರ್ಣಗೊಂಡಿರುವ ಮಕ್ಕಳಿಗೂ ಸಹ 2025-26ನೇ ಸಾಲಿಗೆ ಆರ್.ಟಿ.ಇ. ಅಡಿ ಒಂದನೇ ತರಗತಿಗೆ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಅದರಂತೆ ಅರ್ಜಿ ಸಲ್ಲಿಸಲು 07 ದಿನಗಳ ಕಾಲಾವಕಾಶ ನೀಡಿ ಪರಿಷ್ಕೃತ ವೇಳಾಪಟ್ಟಿಯೊಂದಿಗೆ ಸುತ್ತೋಲೆಯನ್ನು ಹೊರಡಿಸಿದೆ. ಮುಂದುವರೆದು 2025-26ನೇ ಸಾಲಿನ ಆರ್.ಟಿ.ಇ ಅಡಿ ಪ್ರವೇಶ ಪ್ರಕ್ರಿಯೆಗೆ (10) ໖: 25.03.2025 ಸುತೋಲೆಯಲ್ಲಿನ ಮಾರ್ಗಸೂಚಿಯಲ್ಲಿನ ಅಂಶಗಳು ಯಥಾವತ್ತಾಗಿ ಮುಂದುವರೆಯುತ್ತವೆ.

ವಿಶೇಷ ಸೂಚನೆ:
ಉಪನಿರ್ದೇಶಕರು(ಆಡಳಿತ), ಕ್ಷೇತ್ರ ಶಿಕ್ಷಣಾಧಿಕಾರಿಗಳು, ಆರ್.ಟಿ.ಇ. ನೋಡಲ್ ಅಧಿಕಾರಿಗಳು 2025-26ನೇ ಸಾಲಿನ ಆರ್.ಟಿ.ಇ ಅಡಿ ಪ್ರವೇಶಕ್ಕೆ ಸಂಬಂಧಿಸಿದಂತೆ ದಿನಾಂಕ; 25/03/2025 ಮತ್ತು ಪರಿಷ್ಕೃತ ಸುತ್ತೋಲೆಯ ಮಾರ್ಗಸೂಚಿ ಅಂಶಗಳನ್ನು ಅನುಷ್ಠಾನಗೊಳಿಸುವುದು ಮತ್ತು ಪರಿಷ್ಕೃತ ವೇಳಾಪಟ್ಟಿಯಂತೆ ಸಲ್ಲಿಕೆಯಾಗುವ ಅರ್ಜಿಗಳನ್ನು ಆಯಾ ದಿನವೇ ಪರಿಶೀಲಿಸಿ ಇತ್ಯರ್ಥಪಡಿಸಲು ಕ್ರಮವಹಿಸುವುದು. ವ್ಯತ್ಯಯವಾದಲ್ಲಿ ಸಂಬಂಧಿಸಿದ ಅಧಿಕಾರಿಗಳನ್ನೇ ನೇರ ಹೊಣೆಗಾರನ್ನಾಗಿ ಮಾಡಲಾಗುವುದು ಎಂದು ಸೂಚಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read