HomeLatest NewsBIG NEWS : ರಾಜ್ಯದ 1-10 ನೇ ತರಗತಿ ಶಾಲಾ ಮಕ್ಕಳಿಗೆ 'ಸೇತುಬಂಧ' ಕಾರ್ಯಕ್ರಮ...

BIG NEWS : ರಾಜ್ಯದ 1-10 ನೇ ತರಗತಿ ಶಾಲಾ ಮಕ್ಕಳಿಗೆ ‘ಸೇತುಬಂಧ’ ಕಾರ್ಯಕ್ರಮ ಅನುಷ್ಠಾನ : ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶ.!

ಬೆಂಗಳೂರು : ರಾಜ್ಯದ 1-10ನೇ ತರಗತಿ ಶಾಲಾ ಮಕ್ಕಳಿಗೆ ಸೇತುಬಂಧ ಕಾರ್ಯಕ್ರಮ ಅನುಷ್ಠಾನಗೊಳಿಸಿ ಶಿಕ್ಷಣ ಇಲಾಖೆ ಮಹತ್ವದ ಆದೇಶ ಹೊರಡಿಸಿದೆ.

ವಿಷಯಕ್ಕೆ ಸಂಬಂಧಿಸಿದಂತೆ, ಮಕ್ಕಳ ವಯೋಮಾನ ಮತ್ತು ತರಗತಿಗೆ ಅನುಗುಣವಾಗಿ ಕಲಿಕಾ ಮಟ್ಟ ಮತ್ತು ಸಾಮರ್ಥ್ಯಗಳನ್ನು ಗುರುತಿಸಿ ಮುಂದಿನ ಕಲಿಕೆಗೆ ಸಿದ್ಧಗೊಳಿಸಲು ಕಲಿತಿರುವ ಮತ್ತು ಕಲಿಯುತ್ತಿರುವ ಪರಿಕಲ್ಪನೆಗಳ ಅಂತರದ ನಡುವೆ ಸಹ ಸಂಬಂಧ ಕಲ್ಪಿಸುವುದು ಸೇತುಬಂಧ ಕಾರ್ಯಕ್ರಮದ ಮೂಲ ಉದ್ದೇಶವಾಗಿದೆ.

2025-26ನೇ ಸಾಲಿಗೆ 1ನೇ ತರಗತಿಗೆ (ಕಲಿ-ನಲಿ) ಶಾಲಾ ಪ್ರಾರಂಭದ ಮೊದಲ 40 ದಿನಗಳು ವಿದ್ಯಾಪ್ರವೇಶ ಹಾಗೂ 2 ರಿಂದ 10ನೇ ತರಗತಿಗಳಿಗೆ ಮೊದಲ 15 ದಿನಗಳನ್ನು ಸೇತುಬಂಧ ಕಾರ್ಯಕ್ರಮವನ್ನು ಅನುಷ್ಠಾನ ಮಾಡಲು ನಿಗದಿಪಡಿಸಲಾಗಿದೆ. ಈ ಹಿನ್ನೆಲೆಯಲ್ಲಿ 1 ರಿಂದ 10ನೇ ತರಗತಿವರೆಗೆ ತರಗತಿವಾರು ಮತ್ತು ವಿಷಯವಾರು ಕನ್ನಡ ಮತ್ತು ಆಂಗ್ಲ ಮಾಧ್ಯಮ ಹಾಗೂ ಪ್ರಥಮ ಭಾಷೆಗಳಾದ ಉರ್ದು, ಮರಾಠಿ, ತೆಲುಗು ಮತ್ತು ತಮಿಳಿಗೆ ಸಂಬಂಧಿಸಿದ ಕಲಿಕಾ ಸಾಮಗ್ರಿಯು DSERT website ನಲ್ಲಿ ಲಭ್ಯವಿದ್ದು, ಇವುಗಳನ್ನು ಬಳಸಿಕೊಂಡು ಕೆಳಕಂಡ ಕಾರ್ಯತಂತ್ರಗಳನ್ನು ಅನುಸರಿಸಿ ಸೇತುಬಂಧ ಕಾರ್ಯಕ್ರಮವನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸುವುದು.
ಸೇತುಬಂಧ ಕಾರ್ಯಕ್ರಮದ ಅನುಷ್ಠಾನ ಕಾರ್ಯತಂತ್ರಗಳು:

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

2025-26ನೇ ಶೈಕ್ಷಣಿಕ ಸಾಲಿಗೆ ಕನ್ನಡ ಮತ್ತು ಉರ್ದು ಮಾಧ್ಯಮದ ನಲಿ-ಕಲಿಯ 01ನೇ ತರಗತಿಗೆ ವಿದ್ಯಾ ಪ್ರವೇಶ ಹಾಗೂ 02 ಮತ್ತು 03ನೇ ತರಗತಿಗಳಿಗೆ ಸೇತುಬಂಧ ಚಟುವಟಿಕೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ, ಸಮಗ್ರ ಶಿಕ್ಷಣ ಕರ್ನಾಟಕದ ವತಿಯಿಂದ ಹೊರಡಿಸುವ ಸುತ್ತೋಲೆಯನ್ನು ಅನುಸರಿಸುವುದು.

ಕಲಿ-ನಲಿ ಪಠ್ಯಕ್ರಮ ಅನುಸರಿಸುತ್ತಿರುವ ಶಾಲೆಗಳಿಗೆ 01ನೇ ತರಗತಿಗೆ 40 ದಿನಗಳ ವಿದ್ಯಾಪ್ರವೇಶ ಹಾಗೂ 02 ರಿಂದ 10ನೇ ತರಗತಿಗಳಿಗೆ ಕನ್ನಡ & ಆಂಗ್ಲ ಮಾಧ್ಯಮ ಹಾಗೂ ಉರ್ದು, ಮರಾಠಿ, ತೆಲುಗು ಮತ್ತು ತಮಿಳು ಭಾಷೆಗಳ ಸೇತುಬಂಧ ಸಾಹಿತ್ಯ DSERT website ನಲ್ಲಿ ಲಭ್ಯವಿದೆ.ಕಲಿಕಾ ಸಾಮರ್ಥ್ಯಗಳಿಗೆ ಅನುಗುಣವಾಗಿ ತರಗತಿ ಪ್ರಕ್ರಿಯೆಯನ್ನು ಅನುಕೂಲಿಸಲು ಚಟುವಟಿಕೆ ಆಧಾರಿತವಾಗಿ ಕಲಿಕಾ ತಂತ್ರಗಳನ್ನು ರೂಪಿಸಲಾಗಿದೆ ಮತ್ತು ಈ ಚಟುವಟಿಕೆಗಳ ನಿರ್ವಹಣೆಗೆ ಮಾರ್ಗಸೂಚಿಯನ್ನು ನೀಡಲಾಗಿದ್ದು, ಶಿಕ್ಷಕರು ಸದರಿ ಸಾಹಿತ್ಯವನ್ನು ಬಳಸಿ ತಮ್ಮ ತರಗತಿಯ ಪರಿಸರಕ್ಕೆ ಅನುಗುಣವಾಗಿ ಸೇತುಬಂಧ ಕಾರ್ಯಕ್ರಮವನ್ನು ಆಯೋಜಿಸುವುದು.
ಸಾಹಿತ್ಯದಲ್ಲಿ ನೀಡಿರುವ ಅಥವಾ ತಮ್ಮ ಹಂತದಲ್ಲಿ ಸ್ಥಳೀಯ ಸನ್ನಿವೇಶಕ್ಕೆ ಮತ್ತು ಅಪೇಕ್ಷಿತ ಕಲಿಕಾ ಫಲಗಳಿಗೆ ಅನುಗುಣವಾಗಿ ಚಟುವಟಿಕೆ ರೂಪಿಸಿಕೊಂಡು ಅನುಷ್ಠಾನಿಸಲು ಕ್ರಮವಹಿಸುವುದು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular