ಬೆಳಗಾವಿ : ಬೆಳಗಾವಿಯ ರೆಸಾರ್ಟ್ ನಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಗ್ಯಾಂಗ್’ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳ್ನು ಪೊಲೀಸರು ಬಂಧಿಸಿದ್ದಾರೆ . ರಾಜ್ಯದ ಬೇರೆ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಪಿಐ ಪುತ್ರ ಸೇರಿ ಮೂವರನ್ನು ಬಂಧಿಸಲಾಗಿದೆ.
ಪ್ರಕರಣವನ್ನು ಬೆಳಗಾವಿ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಅವರು ಟಿಳಕವಾಡಿ ಪೊಲೀಸ್ ಠಾಣೆಯಿಂದ ಮಾರ್ಕೆಟ್ ಠಾಣೆಗೆ ವರ್ಗಾಯಿಸಿದ್ದಾರೆ ಆರೋಪಿ ಸಾಕೀಬ್ ಮತ್ತು ಇಬ್ಬರು ಅಪ್ರಾಪ್ತ ಬಾಲಕರು ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ್ದು, ಮೂವರನ್ನು ಬೆಳಗಾವಿಯ ಮಾರ್ಕೆಟ್ ಪೊಲೀಸರು ಬಂಧಿಸಿದ್ದಾರೆ.
ಬೆಳಗಾವಿ ಹೊರವಲಯದ ರೆಸಾರ್ಟ್ ನಲ್ಲಿ ಈ ಘಟನೆ ನಡೆದಿದೆ. ಸಾಕೀಬ್ ಎಂಬ ಆರೋಪಿ ಸೇರಿ ಇಬ್ಬರು ಅಪ್ತಾಪ್ತರು ಸೇರಿ ಮೂವರು ಬಾಲಕಿ ಮೇಲೆ ಗ್ಯಾಂಗ್ ರೇಪ್ ನಡೆಸಿದ್ದಾರೆ .ಕಳೆದ ಒಂದು ವಾರದ ಹಿಂದೆ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಬಾಲಕಿ ಸ್ನೇಹಿತ ಆಕೆಯನ್ನು ರೆಸಾರ್ಟ್ ಗೆ ಕರೆತಂದಿದ್ದ, ನಂತರ ಸಾಕೀಬ್ , ಇಬ್ಬರು ಅಪ್ರಾಪ್ತರು ಸೇರಿ ಮೂವರು ಬಾಲಕಿ ಮೇಲೆ ಗ್ಯಾಂಗ್ ರೇಪ್ ನಡೆಸಿದ್ದರು. ಈ ಸಂಬಂಧ ಟಿಳಕವಾಡಿ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿತ್ತು.
ಬಾಲಕಿಯ ಸ್ನೇಹಿತ ಹೇಗೋ ಬಾಲಕಿಯನ್ನು ಪುಸಲಾಯಿಸಿ ರೆಸಾರ್ಟ್ ಗೆ ಕರೆ ತಂದಿದ್ದಾನೆ. ಸಾಕೀಬ್ ಮೊದಲೇ ರೆಸಾರ್ಟ್ ನಲ್ಲಿ ರೂಮ್ ಬುಕ್ ಮಾಡಿದ್ದ. ನಂತರ ಬಾಲಕಿಯನ್ನು ರೆಸಾರ್ಟ್ ಗೆ ಕರೆತಂದು ಮೂವರು ಸಾಮೂಹಿಕವಾಗಿ ಅತ್ಯಾಚಾರ ನಡೆಸಿದ್ದಾರೆ.