HomeLatest Newsರಾಜ್ಯದಲ್ಲಿ ಮತ್ತೆ ಕೋವಿಡ್ ಆತಂಕದಲ್ಲಿದ್ದ ಜನತೆಗೆ ಗುಡ್ ನ್ಯೂಸ್

ರಾಜ್ಯದಲ್ಲಿ ಮತ್ತೆ ಕೋವಿಡ್ ಆತಂಕದಲ್ಲಿದ್ದ ಜನತೆಗೆ ಗುಡ್ ನ್ಯೂಸ್

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಬಗ್ಗೆ ಭಯಪಡಬೇಕಾದ ಪರಿಸ್ಥಿತಿ ಇಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.

ಬೇರೆ ದೇಶಗಳಲ್ಲಿ ಕೊರೋನಾ ಪ್ರಕರಣಗಳು ಹೆಚ್ಚಾಗಿ ವರದಿಯಾಗುತ್ತಿವೆ. ಆದರೆ ನಮ್ಮಲ್ಲಿ ಅಂತಹ ಯಾವುದೇ ಲಕ್ಷಣಗಳು ಪತ್ತೆಯಾಗಿಲ್ಲ. ಹೀಗಾಗಿ ಅನಗತ್ಯವಾಗಿ ಆತಂಕಪಡುವುದು ಬೇಡ. ಕೋವಿಡ್‌ಗೆ ಸಂಬಂಧಿಸಿದಂತೆ ಕೆಂದ್ರ ಸರ್ಕಾರದ ಜತೆಗೆ ಸಂಪರ್ಕದಲ್ಲಿದ್ದೇವೆ. ತಾಂತ್ರಿಕ ಸಲಹಾ ಸಮಿತಿಯ ಸದಸ್ಯರು ಕೂಡ ಚರ್ಚೆ ಮಾಡುತ್ತಿದ್ದಾರೆ. ಈ ಋತುವಿನಲ್ಲಿ ಜ್ವರ ಸಂಬಂಧಿ ಅನಾರೋಗ್ಯ ಸಮಸ್ಯೆಗಳು ಸಹಜವಾಗಿ ಕಾಣಿಸಿಕೊಳ್ಳುತ್ತವೆ. ಇಂತಹ ಸಂದರ್ಭದಲ್ಲಿ ಮಾಸ್ಕ್‌ ಧರಿಸುವಿಕೆಯಂತಹ ಮುನ್ನೆಚ್ಚರಿಕೆ ವಹಿಸುವುದು ಉತ್ತಮ ಎಂದು ಅವರು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular