HomeLatest NewsBREAKING: SSLC ಪರೀಕ್ಷೆ -2 ಹಾಜರಾಗುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: KSRTC ಬಸ್ ಗಳಲ್ಲಿ ಉಚಿತ...

BREAKING: SSLC ಪರೀಕ್ಷೆ -2 ಹಾಜರಾಗುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: KSRTC ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅನುಮತಿ

ಬೆಂಗಳೂರು: ಎಸ್‌ಎಸ್ಎಲ್‌ಸಿ ಪರೀಕ್ಷೆ-2 ಬರೆಯಲು ಪರೀಕ್ಷಾ ಕೇಂದ್ರಗಳಿಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಸಾರಿಗೆ ನಿಗಮದ ಬಸ್‌ಗಳಲ್ಲಿ ಪರೀಕ್ಷಾ ದಿನಗಳಂದು ಉಚಿತವಾಗಿ ಪ್ರಯಾಣಿಸಲು ಅನುಮತಿ ನೀಡಲಾಗಿದೆ.

ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ದಿನಾಂಕ: 26.05.2025 ರಿಂದ ಕರ್ನಾಟಕದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆಗಳು ಪ್ರಾರಂಭವಾಗಲಿವೆ. ಈ ಸಂಬಂಧ ವಿದ್ಯಾರ್ಥಿಗಳಿಗೆ ಅವರ ವಿದ್ಯಾಸಂಸ್ಥೆಯ ಹೊರತಾಗಿ ಇತರೆ ವಿದ್ಯಾಸಂಸ್ಥೆಗಳಿಗೆ ಪರೀಕ್ಷಾ ಕೇಂದ್ರಗಳ ನಿಯೋಜನೆಯಾಗಿರುವುದರಿಂದ. ಪರೀಕ್ಷಾ ಅವಧಿಯಲ್ಲಿ ವಿದ್ಯಾರ್ಥಿಗಳಿಗೆ ವಾಸಸ್ಥಳದಿಂದ ಪರೀಕ್ಷಾ ಕೇಂದ್ರಗಳವರೆಗೆ ನಿಗಮದ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅನುಮತಿಸುವಂತೆ ಉಲ್ಲೇಖಿತ-1 ರ ಪತ್ರದಲ್ಲಿ ಅಧ್ಯಕ್ಷರು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳ ರವರು ಕೋರಿರುತ್ತಾರೆ.

ಅದರನ್ವಯ ಕ.ರಾ.ರ.ಸಾ.ನಿಗಮವು, ಎಸ್‌ಎಸ್‌ಎಲ್‌ಸಿ ಪರೀಕ್ಷೆ-2 ನಡೆಯುವ ದಿನಾಂಕಗಳಂದು ಅಂದರೆ, ದಿನಾಂಕ 26.05.2025 ರಿಂದ 02.06.2025 ರವರೆಗೆ, ಪರೀಕ್ಷೆಗೆ ಹಾಜರಾಗುವ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಹೋಗುವಾಗ ಮತ್ತು ಹಿಂದಿರುಗುವಾಗ “ಎಸ್‌ಎಸ್‌ಎಲ್‌ಸಿ ಪರೀಕ್ಷಾ ಪ್ರವೇಶ ಪತ್ರವನ್ನು” ತೋರಿಸಿ. ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದ್ದು, ಅದರಂತೆ ಕ್ರಮವಹಿಸಲು ನಿಗಮದ ಎಲ್ಲಾ ಚಾಲಕರು ಹಾಗೂ ನಿರ್ವಾಹಕರುಗಳಿಗೆ ಸೂಕ್ತ ತಿಳಿವಳಿಕೆ ನೀಡಲು ಸೂಚಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮುಂದುವರೆದು, ಪ್ರವೇಶ ಪತ್ರದ ಆಧಾರದ ಮೇಲೆ ಬಸ್ ಗಳ ಕಾರ್ಯಾಚರಣಾ ಮಾರ್ಗದಲ್ಲಿ ಪರೀಕ್ಷಾ ಕೇಂದ್ರಗಳಿದ್ದಲ್ಲಿ, ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಸದರಿ ಮಾರ್ಗಗಳಲ್ಲಿ ಕೋರಿಕೆ ನಿಲುಗಡೆ ನೀಡಲು ಕ್ರಮ ಕೈಗೊಳ್ಳುವುದು. ಚಾಲನಾ ಸಿಬ್ಬಂದಿಗಳು ಮೇಲ್ಕಂಡ ನಿರ್ದೇಶನಗಳನ್ನು ತಪ್ಪದೇ ಪಾಲಿಸುವಂತೆ ತಿಳಿಸುವುದು. ಈ ವಿಷಯವನ್ನು ಎಲ್ಲಾ ಘಟಕ ಮತ್ತು ಬಸ್ ನಿಲ್ದಾಣಗಳ ಸೂಚನಾ ಫಲಕಗಳಲ್ಲಿ ಪ್ರದರ್ಶಿಸಿ ಮೇಲ್ಕಂಡ ನಿರ್ದೇಶನಗಳನ್ನು ಜಾರಿಗೊಳಿಸಲು ಕ್ರಮ ವಹಿಸುವಂತೆ ತಿಳಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular