HomeLatest Newsಕೃಷಿ, ಸಹಕಾರ, ಪಶು ಸಂಗೋಪನೆ ಸೇರಿ ಎಲ್ಲಾ ಇಲಾಖೆಗಳಲ್ಲಿ 15 ಸಾವಿರ ಹುದ್ದೆ ಭರ್ತಿ: ಸಿಎಂಗೆ...

ಕೃಷಿ, ಸಹಕಾರ, ಪಶು ಸಂಗೋಪನೆ ಸೇರಿ ಎಲ್ಲಾ ಇಲಾಖೆಗಳಲ್ಲಿ 15 ಸಾವಿರ ಹುದ್ದೆ ಭರ್ತಿ: ಸಿಎಂಗೆ ಆಡಳಿತ ಸುಧಾರಣಾ ಆಯೋಗ ಶಿಫಾರಸು

ಬೆಂಗಳೂರು: ಎಲ್ಲ ಇಲಾಖೆಗಳಲ್ಲಿ ಖಾಲಿ ಇರುವ 15,000 ಹುದ್ದೆಗಳನ್ನು ಆದ್ಯತೆ ಮೇರೆಗೆ ಭರ್ತಿ ಮಾಡುವುದು ಸೇರಿದಂತೆ 189 ಹೊಸ ಶಿಫಾರಸುಗಳನ್ನು ರಾಜ್ಯ ಆಡಳಿತ ಸುಧಾರಣಾ ಆಯೋಗ ಸಲ್ಲಿಸಿದೆ.

ಗುರುವಾರ ಎಂಟನೇ ಆಡಳಿತ ಸುಧಾರಣಾ ವರದಿಯನ್ನು ಆಯೋಗ -2ರ ಅಧ್ಯಕ್ಷ ಆರ್.ವಿ. ದೇಶಪಾಂಡೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಸಿದ್ದಾರೆ.

ಆಯೋಗ ಈಗಾಗಲೇ 23 ಸರ್ಕಾರಿ ಇಲಾಖೆಗಳಿಗೆ ಭೇಟಿ ನೀಡಿ ಕಾರ್ಯವೈಖರಿ ಪರಿಶೀಲಿಸಿದ್ದು, ಇಲಾಖೆ ಸಿಬ್ಬಂದಿ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಅಧ್ಯಯನ ಮಾಡಲಾಗಿದೆ. ಸಾರ್ವಜನಿಕ ಉದ್ಯಮಗಳು ಮತ್ತು ಮಧ್ಯಸ್ಥಗಾರರ ಸಲಹೆ ಆಧಾರದ ಮೇಲೆ 189 ಹೊಸ ಶಿಫಾರಸುಗಳನ್ನು ನೀಡಲಾಗಿದೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 23 ಇಲಾಖೆಗಳಲ್ಲಿ ಒಟ್ಟು 21,442 ಹುದ್ದೆಗಳು ಮಂಜೂರಾಗಿದ್ದು, 15000 ಖಾಲಿ ಹುದ್ದೆಗಳನ್ನು ಗುರುತಿಸಲಾಗಿದೆ. ಕೌಶಲ್ಯಾಭಿವೃದ್ಧಿ ಇಲಾಖೆಯಲ್ಲಿ ಕಿರಿಯ ತರಬೇತಿ ಅಧಿಕಾರಿಗಳ 1521 ಹುದ್ದೆ, ವೈದ್ಯಕೀಯ ಕಾಲೇಜ್ ಗಳ ಕಿರಿಯ ವೈದ್ಯರು 1080, ವೈದ್ಯಕೀಯ ಕಾಲೇಜ್ ನರ್ಸಿಂಗ್ ಅಧಿಕಾರಿಗಳು 1397, ಪಶು ಸಂಗೋಪನಾ ಇಲಾಖೆಯಲ್ಲಿ 1043 ವೈದ್ಯರು, ಕೃಷಿ ಇಲಾಖೆ ಎಎಒ ಹುದ್ದೆಗಳು 1870, ಕೃಷಿ ಅಧಿಕಾರಿ 732, ಸಹಕಾರ ಇಲಾಖೆಯಲ್ಲಿ 453 ಸೇರಿ ಒಟ್ಟು 15000 ಹುದ್ದೆಗಳನ್ನು ಆದ್ಯತೆ ಮೇರೆಗೆ ಭರ್ತಿ ಮಾಡಲು ಶಿಫಾರಸು ಮಾಡಲಾಗಿದೆ ಎಂದು ಆರ್.ವಿ. ದೇಶಪಾಂಡೆ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular