HomeLatest Newsರಾಜ್ಯದ ರೈತರಿಗೆ ಮತ್ತೊಂದು ಗುಡ್ ನ್ಯೂಸ್: 7280 ರೂ. ಬೆಂಬಲ ಬೆಲೆಯಡಿ ಸೂರ್ಯಕಾಂತಿ ಖರೀದಿ

ರಾಜ್ಯದ ರೈತರಿಗೆ ಮತ್ತೊಂದು ಗುಡ್ ನ್ಯೂಸ್: 7280 ರೂ. ಬೆಂಬಲ ಬೆಲೆಯಡಿ ಸೂರ್ಯಕಾಂತಿ ಖರೀದಿ

ಬೆಂಬಲ ಯೋಜನೆಯಡಿ 2024-25 ನೇ ಸಾಲಿನ ಹಿಂಗಾರು ಹಂಗಾಮಿನ ಎಫ್.ಎ.ಕ್ಯೂ ಗುಣಮಟ್ಟದ ಸೂರ್ಯಕಾಂತಿಯನ್ನು ರೈತರಿಂದ ಖರೀದಿಸಲಾಗುವುದು ಎಂದು ಬಳ್ಳಾರಿ ಕೃಷಿ ಮಾರಾಟ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

ಕೇಂದ್ರ ಸರ್ಕಾರದ ಬೆಂಬಲ ಯೋಜನೆಯಡಿ ನಿಗದಿಪಡಿಸಿದ ಬೆಂಬಲ ಬೆಲೆ ಪ್ರತಿ ಕ್ವಿಂಟಾಲ್ ಗೆ 7,280 ರೂ. ರಂತೆ ರೈತರಿಂದ ಖರೀದಿಸಲಾಗುವುದು. ಬೆಂಗಳೂರಿನ ಕರ್ನಾಟಕ ಸಹಕಾರಿ ಎಣ್ಣೆ ಬೀಜ ಬೆಳೆಗಾರರ ಮಹಾಮಂಡಳಿ ನಿಯಮಿತ ವತಿಯಿಂದ ಜಿಲ್ಲೆಯಲ್ಲಿ ಖರೀದಿ ಕೇಂದ್ರಗಳನ್ನು ಆರಂಭಿಸಲಾಗಿದೆ.

ಖರೀದಿ ಕೇಂದ್ರಗಳ ವಿವರ:

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಳ್ಳಾರಿ ಎಪಿಎಂಸಿಯ ಆಡಳಿತ ಕಚೇರಿ(ಮೊ.8722047273, 6366975388). ಬಳ್ಳಾರಿ ತಾಲ್ಲೂಕಿನ ಎಣ್ಣೆ ಬೀಜ ಬೆಳೆಗಾರರ ಸಹಕಾರ ಸಂಘ ನಿಯಮಿತ(ಮೊ.7353155205). ಬೆಂಗಳೂರಿನ ಕರ್ನಾಟಕ ಸಹಕಾರಿ ಎಣ್ಣೆ ಬೀಜ ಬೆಳೆಗಾರರ ಮಹಾಮಂಡಳಿ ನಿಯಮಿತವು ಖರೀದಿ ಏಜೆನ್ಸಿಯಾಗಿರುತ್ತದೆ.

ಬೇಕಾದ ದಾಖಲೆ:

ಆಧಾರ್‌ಕಾರ್ಡ್, ಪ್ರಸ್ತಕ ಸಾಲಿನ ಪಹಣಿ ಪತ್ರ, ಎಫ್‌ಐಡಿ ಕಡ್ಡಾಯ, ರೈತರು ತಮ್ಮ ಹೆಸರನ್ನು ಫ್ರೂಟ್ಸ್ ತಂತ್ರಾAಶದಲ್ಲಿ ಹೆಸರು ನೋಂದಾಯಿಸಿರಬೇಕು. ಬ್ಯಾಂಕ್ ಖಾತೆ ಪುಸ್ತಕದ ನಕಲು ಪ್ರತಿ.

ರೈತರಲ್ಲಿ ಫ್ರೂಟ್ಸ್ ಐಡಿ ಇಲ್ಲದೇ ಇದ್ದಲ್ಲಿ ಅಥವಾ ಫ್ರೂಟ್ಸ್ ನಲ್ಲಿ ಯಾವುದಾದರೂ ತಾಂತ್ರಿಕ ದೋಷವಿದ್ದಲ್ಲಿ ರೈತರು ಕೃಷಿ ಇಲಾಖೆ ಸಂಪರ್ಕಿಸಿ ಅವಶ್ಯಕ ಮಾಹಿತಿ ಪಡೆಯಬಹುದು.

ಒಣಗಿದ ಹಾಗೂ ಸ್ವಚ್ಛ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿ ಉತ್ಪನ್ನವನ್ನು ಕೇಂದ್ರಕ್ಕೆ ಮಾರಾಟ ಮಾಡಲು ತರಬೇಕು. ಸೂರ್ಯಕಾಂತಿ ಖರೀದಿ ಕೇಂದ್ರಗಳಲ್ಲಿ ರೈತರು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು ಹಾಗೂ ನೋಂದಣಿ ಚೀಟಿ ಪಡೆಯಬೇಕು. ನೋಂದಾಯಿಸಿಕೊಳ್ಳಲು ಇಂದಿನಿAದ 80 ದಿನಗಳವರೆಗೆ ಕಾಲಾವಕಾಶ ನೀಡಲಾಗಿದೆ.

ನಿಗಧಿತ ಅವಧಿಯೊಳಗೆ ನೋಂದಾಯಿಸಿಕೊAಡ ರೈತರಿಂದ ಪ್ರತಿ ಎಕರೆಗೆ 04 ಕ್ವಿಂಟಾಲ್‌ನಿAದ ಗರಿಷ್ಠ 20 ಕ್ವಿಂಟಾಲ್ ಮಾತ್ರ ಖರೀದಿಸಲಾಗುವುದು. ಸೂರ್ಯಕಾಂತಿ ಉತ್ಪನ್ನವನ್ನು ಇಂದಿನಿAದ 90 ದಿನಗಳವರೆಗೆ ಬೆಳಿಗ್ಗೆ 09 ಗಂಟೆಯಿAದ ಸಂಜೆ 05 ಗಂಟೆಯವರೆಗೆ ಮಾತ್ರ ಖರೀದಿಸಲಾಗುತ್ತದೆ.

ರೈತರು ಮಧ್ಯವರ್ತಿಗಳ ಮೊರೆ ಹೋಗಬಾರದು, ರೈತರೇ ನೇರವಾಗಿ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕೃಷಿ ಮಾರಾಟ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular