ಬೆಂಗಳೂರು: ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿಗೆ ಭಾಜನರಾದ ಕನ್ನಡದ ಖ್ಯಾತ ಸಾಹಿತಿ ಬಾನು ಮುಷ್ತಾಕ್ ಅವರನ್ನು ಅಭಿನಂದಿಸುವ ನಿರ್ಣಯವನ್ನು ರಾಜ್ಯ ಸಚಿವ ಸಂಪುಟ ಸಭೆ ಗುರುವಾರ ಕೈಗೊಂಡಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಲೇಖಕಿ ಬಾನು ಮುಷ್ತಾಕ್ ಮತ್ತು ಅನುವಾದಕಿ ದೀಪ ಭಾಸ್ತಿ ಅವರಿಗೆ ಅಭಿನಂದನೆ ಸಲ್ಲಿಸಲಾಗಿದೆ.
ಬಾನು ಮುಷ್ತಾಕ್ ಅವರು ಒಪ್ಪಿದರೆ ಬಿಡಿಎ ಜಿ ಕೆಟಗರಿ ನಿವೇಶನ ನೀಡಲು ತೀರ್ಮಾನಿಸಲಾಗಿದೆ ಎಂದು ಸಂಪುಟ ಸಭೆಯ ಬಳಿಕ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಬಾನು ಮುಷ್ತಾಕ್ ಅವರ ‘ಎದೆಯ ಹಣತೆ’ ಕೃತಿಗೆ ಜಗತ್ತಿನ ಪ್ರತಿಷ್ಠಿತ ಅಂತಾರಾಷ್ಟ್ರೀಯ ಬೂಕರ್ ಪ್ರಶಸ್ತಿ ಲಭಿಸಿದೆ. ಅವರು ಇಚ್ಛಿಸಿದಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಜಿ ಕೆಟಗರಿ ನಿವೇಶನ ನೀಡಲು ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಇದನ್ನು ಮೂಲ ಲೇಖಕಿಯಾದ ಬಾನು ಮುಷ್ತಾಕ್ ಒಬ್ಬರಿಗೆ ಮಾತ್ರ ನೀಡಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.