HomeLatest NewsJOB ALERT : ಕೆಲಸ ಹುಡುಕುತ್ತಿರುವವರಿಗೆ ಗುಡ್ ನ್ಯೂಸ್ :  ಡಿ’ ಗ್ರೂಪ್ ಹುದ್ದೆಗೆ ಅರ್ಜಿ...

JOB ALERT : ಕೆಲಸ ಹುಡುಕುತ್ತಿರುವವರಿಗೆ ಗುಡ್ ನ್ಯೂಸ್ :  ಡಿ’ ಗ್ರೂಪ್ ಹುದ್ದೆಗೆ ಅರ್ಜಿ ಆಹ್ವಾನ

ಮಡಿಕೇರಿ : ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ಇಲಾಖೆಗೆ ಸೇರಿರುವ ನಗರದ ಶ್ರೀ ಓಂಕಾರೇಶ್ವರ ದೇವಾಲಯದಲ್ಲಿ ತಾತ್ಕಾಲಿಕ ನೆಲೆಯಲ್ಲಿ ಕರ್ತವ್ಯ ನಿರ್ವಹಿಸಲು 03 ‘ಡಿ’ ಗ್ರೂಪ್ ಹುದ್ದೆಗಳು ಖಾಲಿ ಇದ್ದು, ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸುವವರ ವಯೋಮಿತಿ 18 ವರ್ಷ ತುಂಬಿರಬೇಕು. 35 ವರ್ಷ ಮೀರಿರಬಾರದು. (ವಯಸ್ಸಿನ ಬಗ್ಗೆ ಶಾಲಾ ದಾಖಲೆ ನೀಡಬೇಕು), ದೇವಾಲಯದ ಹೊರಾಂಗಣದ ನೌಕರರು ‘ಡಿ’ ಗ್ರೂಪ್ ಹುದ್ದೆ-2(ಕಾವಲುಗಾರರು) ವೇತನ ರೂ.9,600 ಮತ್ತು ಇತರೆ. ದೇವಾಲಯದ ಕರ್ತವ್ಯದ ಅವಧಿ ಬೆಳಗ್ಗೆ 7.30 ರಿಂದ ಮಧ್ಯಾಹ್ನ 1 ಗಂಟೆ, ಸಂಜೆ 5 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ.

ದೇವಾಲಯದ ಕೆಲಸ ಕಾರ್ಯಗಳು ಮುಜರಾಯಿ ಇಲಾಖೆ ಸೂಚಿಸಿದ ನಿಯಮಗಳು ಹಾಗೂ ಶಿಸ್ತು ಪಾಲನೆಗೆ ಒಳಪಟ್ಟಿರುತ್ತದೆ. ಸರ್ಕಾರಿ ಆಸ್ಪತ್ರೆಯ ವೈದ್ಯಾಧಿಕಾರಿಯಿಂದ ಪಡೆದ ದೇಹ ದಾಢ್ರ್ಯ ಪ್ರಮಾಣ ಪತ್ರ ಹಾಜರುಪಡಿಸುವುದು. ಯಾವುದೇ ಕ್ರಿಮಿನಲ್ ಮೊಕದ್ದಮೆ ಹಾಗೂ ನ್ಯಾಯಾಲಯದ ಆದೇಶದಂತೆ ಕಾರಾಗೃಹದ ಶಿಕ್ಷೆಗೆ ಒಳಪಟ್ಟಿರಬಾರದು. ಅರ್ಜಿ ಸಲ್ಲಿಸಲು ಜೂನ್, 05 ಕೊನೆಯ ದಿನವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೆಚ್ಚಿನ ಮಾಹಿತಿಗೆ ದೇವಾಲಯದ ಕಚೇರಿಯ ಸಮಯ ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 12 ಗಂಟೆ ಒಳಗೆ ಭೇಟಿ ನೀಡಬಹುದಾಗಿದೆ ಎಂದು ಶ್ರೀ ಓಂಕಾರೇಶ್ವರ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ದೇವರಾಜು ಅವರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular