ಬೆಂಗಳೂರು : ತಾಂತ್ರಿಕ ದೋಷದ ಕಾರಣ ಇಂದು ನೇರಳೆ ಮಾರ್ಗದ ನಮ್ಮ ಮೆಟ್ರೋ ಸೇವೆಗಳಲ್ಲಿ ವ್ಯತ್ಯಯವಾಗಿದೆ.
ಈ ಕುರಿತು ಬಿಎಂಆರ್ ಸಿಎಲ್ ಪ್ರಕಟಣೆ ಹೊರಡಿಸಿದ್ದು, ಸಾರ್ವಜನಿಕರಿಗೆ ಈ ಮೂಲಕ ತಿಳಿಸುವುದೇನೆಂದರೆ ಇಂದು, 23ನೇ ಮೇ 2025 ರಂದು ಬೆಳಿಗ್ಗೆ 5:00 ಗಂಟೆಯಿಂದ ನೇರಳೆ ಮಾರ್ಗದ ವೈಟ್‌ಫೀಲ್ಡ್ (ಕಡುಗೋಡಿ) ಮೆಟ್ರೋ ಸ್ಟೇಷನ್‌ನಲ್ಲಿ ತಾಂತ್ರಿಕ ದೋಷ ಕಂಡುಬಂದಿದ್ದು, ಈ ಸ್ಟೇಷನ್‌ನಿಂದ ಟ್ರೇನುಗಳು ಕಾರ್ಯಾಚರಣೆ ತಾತ್ಕಾಲಿಕವಾಗಿ ಸ್ಥಗಿತಗೊಂಡಿವೆ ಎಂದು ತಿಳಿಸಲಾಗುತ್ತದೆ.
ಹಾಗಾಗಿಯು ಮೆಟ್ರೋ ಸೇವೆ ನೇರಳೆ ಮಾರ್ಗದ ಹೋಪ್‌ಫಾರ್ಮ್ ಚನ್ನಸಂದ್ರ ನಿಲ್ದಾಣ ಮತ್ತು ಚಳ್ಳಘಟ್ಟ ನಿಲ್ದಾಣಗಳ ನಡುವೆ ಮಾತ್ರ ಕಾರ್ಯನಿರ್ವಹಿಸಲಿವೆ. ಹಸಿರು ಮಾರ್ಗದಲ್ಲಿ ಸಾಮಾನ್ಯ ಸೇವೆಗಳು ಮುಂದುವರಿಯುತ್ತವೆ. ಪ್ರಯಾಣಿಕರಿಗೆ ಇದರಿಂದಾಗುವ ಅನಾನುಕೂಲತೆಗೆ ವಿಷಾದಿಸುತ್ತೇವೆ ಎಂದು ಬಿಎಂಆರ್ ಸಿಎಲ್ ಪ್ರಕಟಣೆ ಹೊರಡಿಸಿದೆ.
ಸಾರ್ವಜನಿಕರಿಗೆ #BMRCL, ಈ ಮೂಲಕ ತಿಳಿಸುವುದೇನೆಂದರೆ ಇಂದು, 23ನೇ ಮೇ 2025 ರಂದು ಬೆಳಿಗ್ಗೆ 5:00ಗಂಟೆಯಿಂದ ನೇರಳೆ ಮಾರ್ಗದ ವೈಟ್‌ಫೀಲ್ಡ್ (ಕಡುಗೋಡಿ) ಮೆಟ್ರೋ ಸ್ಟೇಷನ್‌ನಲ್ಲಿ ತಾಂತ್ರಿಕ ದೋಷ ಕಂಡುಬಂದಿದ್ದು, ಈ ಸ್ಟೇಷನ್‌ನಿಂದ ಟ್ರೇನುಗಳ ಕಾರ್ಯಾಚರಣೆ ತಾತ್ಕಾಲಿಕವಾಗಿ ಸ್ಥಗಿತಗೊಂಡಿವೆ👇🏻 pic.twitter.com/wTASel0vIf
— ನಮ್ಮ ಮೆಟ್ರೋ (@OfficialBMRCL) May 23, 2025