HomeLatest NewsGOOD NEWS : 'ಶಿಕ್ಷಕ ಹುದ್ದೆ' ಆಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : 51,000...

GOOD NEWS : ‘ಶಿಕ್ಷಕ ಹುದ್ದೆ’ ಆಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : 51,000 ಅತಿಥಿ ಶಿಕ್ಷಕರ ನೇಮಕಾತಿಗೆ ರಾಜ್ಯ ಸರ್ಕಾರ ಆದೇಶ.!

ಬೆಂಗಳೂರು : ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದ್ದು, 51,000 ಅತಿಥಿ ಶಿಕ್ಷಕರ ನೇಮಕಾತಿಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

2024-25 ನೇ ಶೈಕ್ಷಣಿಕ ಸಾಲಿಗೆ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಖಾಲಿಯಿರುವ ಶಿಕ್ಷಕರುಗಳ ಹುದ್ದೆಗಳಿಗೆದುರಾಗಿ ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ 35000 ಅತಿಥಿ ಶಿಕ್ಷಕರುಗಳನ್ನು ಮತ್ತು ಸರ್ಕಾರಿ ಪ್ರೌಢಶಾಲೆಗಳಿಗೆ 10,000 ಅತಿಥಿ ಶಿಕ್ಷಕರಗಳನ್ನು ಒಳಗೊಂಡಂತೆ ಒಟ್ಟು 45,000 (ನಲವತ್ತೈದು ಸಾವಿರ) ಅತಿಥಿ ಶಿಕ್ಷಕರುಗಳನ್ನು ತಾತ್ಕಾಲಿಕವಾಗಿ ನೇರ ನೇಮಕಾತಿ ಮೂಲಕ ಶಿಕ್ಷಕರನ್ನು ಭರ್ತಿ ಮಾಡುವವರೆಗೆ ಅಥವಾ ಶೈಕ್ಷಣಿಕ ವರ್ಷದ ಅಂತ್ಯದವರೆಗೆ ಎಂಬ ಷರತ್ತಿಗೊಳಪಟ್ಟು ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಸರ್ಕಾರವು ಮಂಜೂರಾತಿ ನೀಡಿ ಆದೇಶಿಸಲಾಗಿರುತ್ತದೆ.

ಮೇಲೆ ಓದಲಾದ ಕ್ರಮ ಸಂಖ್ಯೆ (2)ರ ನಿರ್ದೇಶಕರು (ಪ್ರಾಥಮಿಕ ಶಿಕ್ಷಣ), ಆಯುಕ್ತರ ಕಛೇರಿ, ಶಾಲಾ ಶಿಕ್ಷಣ ಇಲಾಖೆ, ಬೆಂಗಳೂರು ಇವರ ಪತ್ರದಲ್ಲಿ 2025-26ನೇ ಶೈಕ್ಷಣಿಕ ವರ್ಷದ ಏಕ ರೂಪದ ಮಾರ್ಗಸೂಚಿಯನ್ನು ನಿಗಧಿಪಡಿಸಿ ದಿನಾಂಕ: 29.05.2025 ರಂದು ಶಾಲೆಗಳು ಪ್ರಾರಂಭವಾಗಲಿದ್ದು, ಅದರಂತೆ, 2025-26 ನೇ ಸಾಲಿನಲ್ಲಿ ಪೂರ್ವ ನಿಗದಿಯಂತೆ ಶಾಲಾ ಶೈಕ್ಷಣಿಕ ಚಟುವಟಿಕೆಗಳನ್ನು ಪ್ರಾರಂಭಿಸಿ ನಿರ್ವಹಣೆ ಮಾಡಬೇಕಾಗಿದ್ದು, ಶಾಲಾ ಪ್ರಾರಂಭದ ದಿನವೇ ಶಾಲೆಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳಿಗೆ ಎದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಖಾಯಂ ಶಿಕ್ಷಕರ ನೇಮಕವಾಗುವವರೆಗೆ ಅಥವಾ ಶೈಕ್ಷಣಿಕ ವರ್ಷದ ಅಂತ್ಯದವರೆಗೆ ಯಾವುದು ಮೊದಲೂ ಅಲ್ಲಿಯವರೆಗೆ ಶಿಕ್ಷಕರ ಕೊರತೆಯನ್ನು ನೀಗಿಸುವ ದೃಷ್ಟಿಯಿಂದ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳುವ ಅನಿವಾರ್ಯತೆ ಇದ್ದು, ಪ್ರಾಥಮಿಕ/ಪ್ರೌಢಶಾಲೆಗಳನ್ನು ಪ್ರಾರಂಭಿಸಿ, ಶೈಕ್ಷಣಿಕ ಚಟುವಟಿಕೆಗಳ ನಿರ್ವಹಣೆ ಮಾಡಬೇಕಾಗಿರುತ್ತದೆ ಎಂದು ವರದಿ ಮಾಡುತ್ತಾ, ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ – ಶಾಲೆಯಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳಿಗೆದುರಾಗಿ ಶೈಕ್ಷಣಿಕ ವರ್ಷದ ಪ್ರಾರಂಭದಲ್ಲೇ ಅತಿಥಿ ಶಿಕ್ಷಕರನ್ನು ಶಾಲೆಗಳಿಗೆ ಲಭ್ಯಪಡಿಸಿದ್ದಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಬೋಧನಾ ಪ್ರಕ್ರಿಯೆಗೆ ಅನುಕೂಲವಾಗುತ್ತದೆಂಬ ಅಂಶದೊಂದಿಗೆ ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ 45,000 ಹಾಗೂ ಪ್ರೌಢಶಾಲೆಗಳಿಗೆ 11,000 ಒಟ್ಟು 56,000 (ಐವತ್ತಾರು ಸಾವಿರ) ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲು ಕೋರಿ ಸರ್ಕಾರಕ್ಕೆ ಪುಸ್ತಾವನೆಯಲ್ಲಿ ಸಲ್ಲಿಸಿರುತ್ತಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ 2025-26 ನೇ ಶೈಕ್ಷಣಿಕ ಸಾಲಿಗೆ ಸರ್ಕಾರಿ ಪ್ರಾಥಮಿಕ ಮತ್ತು ಶಾಲೆಗಳಲ್ಲಿ ಖಾಲಿಯಿರುವ ಶಿಕ್ಷಕರುಗಳ ಹುದ್ದೆಗಳಿಗೆದುರಾಗಿ ಶೈಕ್ಷಣಿಕ ಹಿತದೃಷ್ಟಿಯಿಂದ ಅತಿಥಿ ಶಿಕ್ಷಕರುಗಳನ್ನು ತಾತ್ಕಾಲಿಕವಾಗಿ ನೇರ ನೇಮಕಾತಿ ಮೂಲಕ ಶಿಕ್ಷಕರನ್ನು ಭರ್ತಿ ಮಾಡುವವರೆಗೆ ಅಥವಾ ಶೈಕ್ಷಣಿಕ ವರ್ಷದ ಅಂತ್ಯದವರೆಗೆ ಎಂಬ ಷರತ್ತಿಗೊಳಪಟ್ಟು ಈ ಕೆಳಕಂಡಂತೆ ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲು ಸರ್ಕಾರವು ಮಂಜೂರಾತಿ ನೀಡಿ ಆದೇಶಿಸಿದೆ.


For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular